ಜನಮನ

ಪರಿಸರ ನಿಯಮ ಉಲ್ಲಂಘಿಸಿ ಗೋಲ್ಡನ್ ಸ್ಟಾರ್ ಗಣೇಶ್ ಬೃಹತ್ ಕಟ್ಟಡಕ್ಕೆ ಆಕ್ಷೇಪ

Views: 0

ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ಪರಿಸರದ ಸೂಕ್ಷ್ಮಲಯದಲ್ಲಿ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರು ಕಟ್ಟಡ ನಿರ್ಮಿಸಲು ಮುಂದಾಗಿದ್ದು, ಪರಿಸರವಾದಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಗುಂಡ್ಲುಪೇಟೆ ತಾಲೂಕು ಹಂಗಳ ಹೋಬಳಿಯ ಚಿಕ್ಕಹಳ್ಳಿಯ ಸರ್ವೇ ನಂಬರ್ 105ರಲ್ಲಿ ಒಂದು ಎಕ್ರೆ 24ಗುಂಟೆ ಜಮೀನನ್ನು ಗಣೇಶ ಹೊಂದಿದ್ದರು.ಇದು ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವಲಯದಲ್ಲಿದೆ.

ಈ ಜಮೀನು ಪರಿಸರ ಸೂಕ್ಷ್ಮ ವಲಯ ಹಾಗೂ ಆನೆ ಕಾರಿಡಾರ್ ನಲ್ಲಿದೆ ಎಂದು ತಿಳಿದಿದ್ದರೂ ಅಧಿಕಾರಿಗಳು ಕಟ್ಟಡ ನಿರ್ಮಿಸಲು ಅವಕಾಶ ನೀಡಿರುವುದು ದುರಂತವೇ ಸರಿ ಎಂದು ಪರಿಸರವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಜಾಗದಲ್ಲಿ ವಾಸ ಹಾಗೂ ಕೃಷಿ ಉಪಕರಣಗಳನ್ನು ಇರಿಸಲು ಮನೆ ನಿರ್ಮಿಸಲು ಅನುಮತಿ ನೀಡಿದ್ದರು. ವಾಣಿಜ್ಯ ಉದ್ದೇಶದ ಕಟ್ಟಡ ನಿರ್ಮಿಸುವಂತಿಲ್ಲ ಎಂಬ ಷರತ್ತನ್ನು ಹಾಕಿದ್ದರು. ಅದೇ ಸ್ಥಳದಲ್ಲಿ ದೊಡ್ಡ ದೊಡ್ಡ ಪಿಲ್ಲರ್ ಗಳನ್ನು ನಿರ್ಮಿಸಲಾಗಿದೆ.

ಕಟ್ಟಡದಿಂದ ರೈತರಿಗೆ ತೊಂದರೆಯಾಗುತ್ತಿದೆ ರೈತರು ಸೆಲೆಬ್ರಿಟಿಗಳು ಎನ್ನದೆ ತಾರತಮ್ಯ ಮಾಡಬಾರದು ಎಲ್ಲರನ್ನು ಒಂದೇ ರೀತಿಯಲ್ಲಿ ಕಾಣಬೇಕು ಎಂದು ಪರಿಸರ ವಾದಿಗಳು ತಿಳಿಸಿದ್ದಾರೆ.

Related Articles

Back to top button
error: Content is protected !!