ಶಿಕ್ಷಣ
ಪರೀಕ್ಷೆ ಮುಗಿಸಿ ಮನೆಗೆ ಬರುವಾಗ ಕಾರು ಡಿಕ್ಕಿ: ವಿದ್ಯಾರ್ಥಿ ಸಾವು

Views: 185
ಮೂಡುಬಿದಿರೆ :ಪರೀಕ್ಷೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಕಾರು ಡಿಕ್ಕಿಯಾಗಿ ಮೃತಪಟ್ಟ ಘಟನೆ ನಡೆದಿದೆ.
ಪಡು ಮಾರ್ಗಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಚ್ಚರಕಟ್ಟೆ ನಿವಾಸಿ ರವಿ ಅವರ ಪುತ್ರ ಮೂಡುಬಿದರೆ ಜೈನ ಪ್ರೌಢಶಾಲೆಯ 9ನೇ ತರಗತಿಯ ಆದಿತ್ಯ ಮೃತಪಟ್ಟ ವಿದ್ಯಾರ್ಥಿ
ಆದಿತ್ಯ ಪರೀಕ್ಷೆ ಮುಗಿಸಿ ತನ್ನ ಗೆಳೆಯರೊಂದಿಗೆ ಮನೆಗೆ ಹೊರಟಿದ್ದ, ಬನ್ನಡ್ಕದಲ್ಲಿ ಬಸ್ಸಿನಿಂದ ಇಳಿದು ರಸ್ತೆ ದಾಟುವ ಸಂದರ್ಭದಲ್ಲಿ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿ ಹೊಡದ ಪರಿಣಾಮ ಆದಿತ್ಯ ಹೆದ್ದಾರಿಯಿಂದ ಚರಂಡಿಗೆ ಎಸೆಯಲ್ಪಟ್ಟಿದ್ದಾನೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪರೀಕ್ಷಿಸಿದ ವೈದ್ಯರು ವಿದ್ಯಾರ್ಥಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.