ಕೃಷಿ

ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ ರೈತರ ಆಕ್ರೋಶ 

Views: 156

ಉಡುಪಿ :ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯ ಗಳನ್ನು ಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಯ ಕಲಂ 4(4)(ಬಿ)(2)ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಸರಕಾರದಿಂದ ಅನುಮತಿ ಯನ್ನು ನೀಡಲಾಗಿದ್ದು, ಜಿಲ್ಲೆಯ ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ವೆಬ್‌ಸೈಟ್ – https://landrecords.karnataka.gov.in/service4-ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ ಲಿಂಕ್ ಮಾಡಿಸಲು ಅವಕಾಶ ವನ್ನು ಕಲ್ಪಿಸಲಾಗಿದೆ.

ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ. ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಪಹಣಿಗೆ ಆಧಾರ್ ಸೀಡಿಂಗ್ ರೈತರ ಆಕ್ರೋಶ 

ಅದೃಷ್ಟ ಚನಾಗಿದ್ದರೆ, ಮನೆಯಲ್ಲಿ ನೆಟ್ವರ್ಕ್ ಸಿಕ್ಕಿದರೆ ಅಂಗಳದ ತುದಿ ನಿಂತು ಪಹಣಿಗೆ ಆಧಾರ್ ಸೀಡಿಂಗ್ ಮಾಡಿಕೊಳ್ಳಬಹುದು. ಇಲ್ಲವಾದರೆ, ಗ್ರಾಮ ಲೆಕ್ಕಿಗ, ಪಿಡಿಒಗಳನ್ನು ಭೇಟಿ ಮಾಡಿ, ಅಲ್ಲಿ ಸರ್ವರ್ ಸರಿ ಇದ್ದರೆ ಅಧಿಕಾರಿಗಳು ಫೀಲ್ಡ್ ವರ್ಕಿಗೆ ಹೋಗಿಲ್ಲ ಅಂದರೆ  ಅಲ್ಲಿ ಹೋಗಿ ಮಾಡಿಸಿಕೊಳ್ಳಬಹುದು.

ಈಗಾಗಲೇ ಬೆಳೆ ಸರ್ವೆಗೆ ಆಧಾರ್ ಲಿಂಕ್ ಆಗಿದೆ, ಫ್ರೂಟ್ ಐಡಿಗೆ ಪಹಣಿ ಲಿಂಕ್ ಆಗಿದೆ. ಈಗ ಪಹಣಿಗೆ ಆಧಾರ್ ಬೀಜ ಬಿತ್ತೋಕೆ (ಸೀಡಿಂಗ್) ರೈತರೇ ಈ ಬರಗಾಲದಲ್ಲಿ ಸುಸ್ತಾಗಿ ಸಾಯಬೇಕಾ? ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

 

 

Related Articles

Back to top button