ಇತರೆ
ಪಾಮ್ ಆಯಿಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ; ಎಣ್ಣೆಗಾಗಿ ಮುಗಿಬಿದ್ದ ಜನ
Views: 45
ಕನ್ನಡ ಕರಾವಳಿ ಸುದ್ದಿ: ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ದೇವಲಾಪುರ ಸಮೀಪ ಪಾಮ್ ಆಯಿಲ್ ಸಾಗಿಸುತ್ತಿದ್ದ ಟ್ಯಾಂಕರ್ ಒಂದು ಅಪಘಾತಕ್ಕೀಡಾಗಿ ಪಲ್ಟಿಯಾಗಿ, ಎಣ್ಣೆ ರಸ್ತೆಯ ಮೇಲೆ ಸೋರಿಕೆಯಾಗಿದೆ.
ಸುತ್ತಮುತ್ತಲಿನ ಗ್ರಾಮಸ್ಥರು ಬಕೆಟ್, ಕ್ಯಾನ್‌ಗಳು ಮತ್ತು ವಿವಿಧ ಪಾತ್ರೆಗಳನ್ನು ಹಿಡಿದುಕೊಂಡು ಸ್ಥಳಕ್ಕೆ ಧಾವಿಸಿದ್ದು, ರಸ್ತೆಯ ಮೇಲೆ ಹರಿದಾಡುತ್ತಿದ್ದ ಪಾಮ್ ಆಯಿಲ್ ಅನ್ನು ಸಂಗ್ರಹಿಸುವಲ್ಲಿ ತೊಡಗಿದ್ದಾರೆ.
ಟ್ಯಾಂಕರ್ ಪಲ್ಟಿಯಾದ ವೇಳೆ ಲಾರಿಯ ಚಾಲಕ ಮತ್ತು ಕ್ಲೀನರ್ ಅದೃಷ್ಟವಶಾತ್ ಯಾವುದೇ ಗಂಭೀರ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.






