ಕೃಷಿ

ಪಿಎಂ ಕಿಸಾನ್ ಯೋಜನೆ 21ನೇ ಕಂತಿನ ಹಣ ರೈತರ ಖಾತೆಗೆ ಯಾವಾಗ?

Views: 91

ಕನ್ನಡ ಕರಾವಳಿ ಸುದ್ದಿ: ದೇಶಾದ್ಯಂತ ಸಾವಿರಾರು ರೈತರು ಕಾಯುತ್ತಿರುವ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಶೀಘ್ರದಲ್ಲೇ ಕೈಸೇರಲಿದೆ.

ರೈತರ ಆರ್ಥಿಕ ಅಗತ್ಯಗಳನ್ನು ಪೂರೈಸಲು ಕೇಂದ್ರ ಸರ್ಕಾರ ಆರಂಭಿಸಿದ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿಯಲ್ಲಿ ರೈತರಿಗೆ 2,000 ರೂ. ಅನ್ನು ನೀಡಲಾಗುತ್ತದೆ. ಇದರ ವಿತರಣೆ ಪ್ರಕ್ರಿಯೆಯು ಹಲವಾರು ರಾಜ್ಯಗಳಲ್ಲಿ ಈಗಾಗಲೇ ಪ್ರಾರಂಭವಾಗಿದೆ. ದೀಪಾವಳಿ ಹಬ್ಬಕ್ಕೂ ಮೊದಲು ಇದು ರೈತರ ನಿರೀಕ್ಷೆ ಇದೆ.

ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿಯಲಿ ರೈತರಿಗೆ ವಾರ್ಷಿಕವಾಗಿ 6,000 ರೂ. ಅನ್ನು 2,000 ರೂ. ಆಗಿ ತಲಾ ಮೂರು ಸಮಾನ ಕಂತುಗಳಲ್ಲಿ ವಿತರಿಸಲಾಗುತ್ತದೆ. ಇದರ ವಿತರಣೆ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದೆ. ದೀಪಾವಳಿ ಹಬ್ಬಕ್ಕೂ ಮೊದಲು ರೈತರು ಅದನ್ನು ಪಡೆಯುವ ಸಾಧ್ಯತೆ ಇದೆ. ಕಿಸಾನ್ ಸಮ್ಮಾನ್ ಯೋಜನೆಯ 20ನೇ ಕಂತನ್ನು 2025ರ ಆಗಸ್ಟ್ 2ರಂದು ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದರು.

Related Articles

Back to top button