ಶಿಕ್ಷಣ
ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

Views: 148
ಕನ್ನಡ ಕರಾವಳಿ ಸುದ್ದಿ: ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ ಆದರೂ ಕಡಿಮೆ ಅಂಕ ಬಂದಿದೆ ಎಂದು ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಅರಸೀಕೆರೆಯಲ್ಲಿ ಇಂದು ನಡೆದಿದೆ.
ಕೆ.ಪಿ.ಮನೋಜ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದು ಪಿಯುಸಿ ಪರಿಕ್ಷೇಯಲ್ಲಿ ನಿರೀಕ್ಷಿತ ಅಂಕ ಬಾರದಿದ್ದಕ್ಕೆ ಮನನೊಂದು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ
ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮನೋಜ್ ಪಿಯುಸಿ ಯಲ್ಲಿ ಪಿಸಿಎಂಬಿ ತೆಗೆದುಕೊಂಡಿದ್ದ. ಎಸ್ ಎಸ್ ಎಲ್ ಸಿ ಯಲ್ಲಿ 98% ಗಳಿಸಿದ್ದ. ನೆನ್ನೆ ಬಂದ ಫಲಿತಾಂಶದಲ್ಲಿ 79 % ಅಂಕ ಗಳಿಸಿದ್ದ. ಪಿಯುಸಿ ಯಲ್ಲಿ 79% ಅಂಕ ಗಳಿಸಿದ್ದರೂ ಅದನ್ನೇ ಕಡಿಮೆ ಎಂದು ಭಾವಿಸಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗನನ್ನು ಕೆಲದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.