ಇತರೆ

ಪಿಯುಸಿ  ಪರೀಕ್ಷೆ ಬರೆದ ಕೆಲವೇ ಗಂಟೆಗಳಲ್ಲಿ ವಿದ್ಯಾರ್ಥಿನಿ ಶೌಚಾಲಯದಲ್ಲಿ ಮಗುವಿಗೆ ಜನ್ಮ! 

Views: 54

ಕನ್ನಡ ಕರಾವಳಿ ಸುದ್ದಿ: ಪ್ರಥಮ ಪಿಯುಸಿ  ಪರೀಕ್ಷೆ ಬರೆದ ಕೆಲವೇ ಗಂಟೆಗಳಲ್ಲಿ 16 ವರ್ಷದ ವಿದ್ಯಾರ್ಥಿನಿಯೊಬ್ಬಳು ಸಾರ್ವಜನಿಕ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ತಲಂಗಾಣದ  ನಾಗರಕರ್ನೂಲ್ ನಲ್ಲಿ ನಡೆದಿದೆ.

ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಈ ವಿದ್ಯಾರ್ಥಿನಿಗೆ, ಸೋಮವಾರ ಪರೀಕ್ಷೆ ಮುಗಿಸಿ ಹೊರಬಂದ ನಂತರ ತೀವ್ರ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆ ಈ ಘಟನೆ ಬೆಳಕಿಗೆ ಬಂದಿದೆ.

ವಿದ್ಯಾರ್ಥಿನಿಯು ಹೊಟ್ಟೆನೋವಿನ ಬಗ್ಗೆ ದೂರು ನೀಡಿದ ತಕ್ಷಣ ಆಕೆಯ ತಾಯಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ತಪಾಸಣೆ ನಡೆಸಿದ ವೈದ್ಯರು ಸ್ಕ್ಯಾನಿಂಗ್ ಮಾಡಿಸುವಂತೆ ಸೂಚಿಸಿ ಹತ್ತಿರದ ಡಯಾಗೋಸ್ಟಿಕ್ ಸೆಂಟರ್‌ಗೆ ಕಳುಹಿಸಿಕೊಟ್ಟಿದ್ದಾರೆ. ಅಲ್ಲಿ ಸ್ಕ್ಯಾನಿಂಗ್‌ಗಾಗಿ ಸರತಿಯ ಸಾಲಿನಲ್ಲಿ ಕಾಯುತ್ತಿದ್ದಾಗ ಬಾಲಕಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಕೂಡಲೇ ಆಕೆ ಶೌಚಾಲಯಕ್ಕೆ ತೆರಳಿದ್ದು, ಅಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ. ಬಳಿಕೆ ಶೌಚಾಲಯ ಮಗುವಿನ ಅಳುವಿನ ಶಬ್ದ ಕೇಳಿ ಸಿಬ್ಬಂದಿ ಧಾವಿಸಿದಾಗ ವಿಷಯ ತಿಳಿದುಬಂದಿದೆ. ಆರಂಭಿಕ ವರದಿಗಳ ಪ್ರಕಾರ, ಬಾಲಕಿ ಮತ್ತು ಆಕೆಯ ತಾಯಿ ಮಗುವನ್ನು ಶೌಚಾಲಯದೆ ಕಸದ ಬುಟ್ಟಿಯಲ್ಲಿ ಬಿಟ್ಟು ಬರಲು ಯತ್ನಿಸಿದ್ದರು ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿನಿ ಮತ್ತು ನವಜಾತ ಶಿಶುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ತಾಯಿ-ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

 

Related Articles

Back to top button
error: Content is protected !!