ಜನಮನ

ಪಿಯುಸಿ  ಪಾಸಾದವರಿಗೆ 731 ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನ

Views: 36

ಕನ್ನಡ ಕರಾವಳಿ ಸುದ್ದಿ: ಸಿಬ್ಬಂದಿ ನೇಮಕಾತಿ ಆಯೋಗ (ಎಸ್ಎಸ್ಸಿ) ಆಯೋಗದಿಂದ ವಿವಿಧ ಸಚಿವಾಲಯ ಮತ್ತು ಇಲಾಖೆಗಳಿಗೆ ಗ್ರೇಡ್ ಸಿ ಮತ್ತು ಡಿ ಸ್ಟೇನೋಗ್ರಾಫರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ದೇಶಾದ್ಯಾಂತ ಈ ನೇಮಕಾತಿ ನಡೆಯಲಿದ್ದು, 731 ಹುದ್ದೆಗಳ ಭರ್ತಿ ನಡೆಯಲಿದೆ.

ಹುದ್ದೆ ವಿವರ: ಒಟ್ಟು ಹುದ್ದೆಗಳು 771

ವಿದ್ಯಾರ್ಹತೆ: ಅಭ್ಯರ್ಥಿಗಳು ಪಿಯುಸಿ ಉತ್ತೀರ್ಣರಾಗಿರಬೇಕು.

ವಯೋಮಿತಿ: ಕನಿಷ್ಠ ವಯೋಮಿತಿ ಗ್ರೇಡ್ ಸಿ ಸ್ಟೇನೋಗ್ರಾಫರ್ ಹುದ್ದೆಗೆ ಗರಿಷ್ಠ ವಯೋಮಿತಿ 30 ವರ್ಷ, ಗ್ರೇಡ್ ಡಿ ಸ್ಟೇನೋಗ್ರಾಫರ್ ಹುದ್ದೆಗೆ ಗರಿಷ್ಠ ವಯೋಮಿತಿ 27 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ. ಜಾ, ಪ.ಪಂ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ವಿಧಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ.

ಈ ಹುದ್ದೆ ಎಗೆ ಎಪ್ರಿಲ್ 24ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಮೇ 15 ಆಗಿದೆ. ಈ ಹುದ್ದೆಗಳಿಗೆ ಜುಲೈ ಅಥವಾ ಆಗಸ್ಟ್ನಲ್ಲಿ ಪರೀಕ್ಷೆ ನಡೆಯುವ ಸಾಧ್ಯತೆ ಇದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ssc.gov.in ಭೇಟಿ ನೀಡಿ.

Related Articles

Back to top button
error: Content is protected !!