ಯುವಜನ
ಪಿಯುಸಿ ವಿದ್ಯಾರ್ಥಿನಿ ವಿಷ ಸೇವಿಸಿ ಅತ್ಮಹತ್ಯೆ

Views: 223
ಕನ್ನಡ ಕರಾವಳಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪ ವಿಷ ಸೇವಿಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಮಿತ್ತಬಾಗಿಲು ಎಂಬಲ್ಲಿ ಸಂಭವಿಸಿದೆ.
ಮೃತಪಟ್ಟ ವಿದ್ಯಾರ್ಥಿನಿ ಋಶ್ವಿ(17) ಎಂದು ತಿಳಿದುಬಂದಿದೆ.
ವಿದ್ಯಾರ್ಥಿನಿ ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಕೆಲವು ದಿನಗಳ ಹಿಂದೆ ಯಾವುದೋ ಕಾರಣಕ್ಕೆ ವಿಷ ಸೇವಿಸಿದ್ದು ಕೂಡಲೇ ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ
ಈ ಬಗ್ಗೆ ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






