ಇತರೆ

ಪುತ್ತೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆಗೆ ಫಲಿಸದೆ ಸಾವು 

Views: 78

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ.

ಮೃತ ವಿದ್ಯಾರ್ಥಿನಿ ಮಂಜುಶ್ರೀ (20)  ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ, ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿನಿ

ಈ ಹಿಂದೆ ಕಬಕ ಸಮೀಪದ ಕೂವೆತ್ತಿಲದಲ್ಲಿ ಆಲ್ಟೋ ಕಾರು ಹಾಗೂ ಆಕ್ಟಿವಾ ನಡುವೆ ನಡೆದ ಅಪಘಾತದಲ್ಲಿ ಮಂಜುಶ್ರೀ ಗಂಭೀರ ಗಾಯಗೊಂಡಿದ್ದರು.‌ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ರಾತ್ರಿ ವೇಳೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

Related Articles

Back to top button
error: Content is protected !!