ಜನಮನ
ಪುತ್ತೂರು ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Views: 0
ಪುತ್ತೂರು ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಬನ್ನೂರು ಸಮೀಪದ ಸನ್ನಿಧಿ ಲೇಔಟ್ ನಲ್ಲಿ ನಡೆದಿದೆ.
ಖಾಸಗಿ ಕಾಲೇಜಿನಲ್ಲಿ ತೃತೀಯ ಬಿಸಿಎ ಓದುತ್ತಿದ್ದ ಕೀರ್ತಿಕಾ (19) ಮೃತ ಯುವತಿ.ಕೀರ್ತಿಕಾ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಈಕೆ ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.ಪುತ್ತೂರು ಠಾಣಾ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ






