ಜನಮನ

ಪೋಕ್ಸೋ ಕೇಸ್ ಆರೋಪಿ ಕೋರ್ಟ್ ಕಟ್ಟಡದ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

Views: 249

ಕನ್ನಡ ಕರಾವಳಿ ಸುದ್ದಿ: ಪೋಕ್ಸೋ ಕೇಸ್ ಆರೋಪಿ ಕೋರ್ಟ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಲ್ಲಿ ನಡೆದಿದೆ.

ಆರೋಪಿಯನ್ನು ಇಂದು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ಏಕಾಏಕಿ ಕೋರ್ಟ್ ನ 5ನೇ ಮಹಡಿಗೆ ತೆರಳಿದ ಆರೋಪಿ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿ ಕಟ್ಟಡದಿಂದ ಹಾರಿದ್ದಾನೆ

ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಗಂಭಿರವಾಗಿ ಗಾಯಗೊಂಡಿದ್ದ ಆರೋಪಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.

Related Articles

Back to top button
error: Content is protected !!