ಪೋಕ್ಸೋ ಪ್ರಕರಣ: ಬಿ.ಎಸ್.ಯಡಿಯೂರಪ್ಪ ವಿರುದ್ಧ ಮೇಲ್ನೋಟಕ್ಕೆ ವಿಚಾರಣೆ ನಡೆಯ ಬೇಕಾದ ಅಗತ್ಯವಿದೆ- ಹೈಕೋರ್ಟ್

Views: 1
ಕನ್ನಡ ಕರಾವಳಿ ಸುದ್ದಿ: ಅಪ್ರಾಪ್ತಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಮೇಲ್ನೋಟಕ್ಕೆ ವಿಚಾರಣೆ ನಡೆಯ ಬೇಕಾದ ಅಗತ್ಯವಿದೆ ಎಂದು ಹೈಕೋರ್ಟ್ ಮೌಖಿಕವಾಗಿ ಅಭಿಪ್ರಾಯ ಪಟ್ಟಿದೆ.
ಪೋಕ್ಸೋ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯ ಪರಿಗಣಿಸಿರುವುದನ್ನು ಪ್ರಶ್ನಿಸಿ ಯಡಿಯೂರಪ್ಪ ಮತ್ತಿತರರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ಪಟ್ಟಿತು.
ಯಡಿಯೂರಪ್ಪ ಅವರು ವಿರೋಧ ಪಕ್ಷದಲ್ಲಿದ್ದಾರೆ. ಅನಗತ್ಯವಾಗಿ ಕಿರುಕುಳ ನೀಡುತ್ತಾರೆ ಎಂದು ಹೇಳಬಹುದು. ಕಿರುಕುಳ ತಪ್ಪಿಸಿ, ನ್ಯಾಯಯುತ ವಿಚಾರಣೆಗೆ ಸಂಬಂಧಿಸಿದಂತೆ ರಕ್ಷಣೆ ಮಾಡಬಹುದು. ಅಂಥ ಅಂಶವನ್ನು ಉಲ್ಲೇಖಿಸಿ, ಮೆರಿಟ್ ಮೇಲೆ ಯಾವುದೇ ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ, ಹಿಂದೆ ಸಲ್ಲಿಕೆ ಮಾಡಿದ್ದ ಅರ್ಜಿಯಲ್ಲಿ ಉಲ್ಲೇಖಿಸಿರುವ ವಿಚಾರಗಳ ಬಗ್ಗೆ ನಿಮ್ಮ ಆತಂಕ ಇರಬಹುದು. ನಿಮ್ಮ ಹಿರಿಯ ವಕೀಲರನ್ನು ಕೇಳಿ. ಇದು ವಿಚಾರಣೆಗೆ ಅರ್ಹವಾದ ಪ್ರಕರಣ.ಇಲ್ಲವಾದಲ್ಲಿ ಈ ಪ್ರಕರಣವನ್ನು ಒಂದು ವಾರ ವಿಚಾರಣೆ ನಡೆಸಬೇಕಾಗುತ್ತದೆ ಎಂದು ಪೀಠ ಹೇಳಿದೆ.
ಇದಕ್ಕೆ ಪ್ರತಿಕ್ರಿಯಿಸಿದ ವಕೀಲ ಸಂದೀಪ್ ಪಾಟೀಲ್, ನ್ಯಾಯಾಲಯದ ಅಭಿಪ್ರಾಯ ಏನಿದೆ ಎಂಬ ಅಂಶಗಳು ಅರ್ಥವಾಗುತ್ತದೆ. ಈ ಕುರಿತು ಚರ್ಚಿಸಿ, ವಿಚಾರ ತಿಳಿಸಲಾಗುವುದು ಎಂದು ಪೀಠಕ್ಕೆ ವಿವರಿಸಿದರು.