ರಾಜಕೀಯ

ಜಾತ್ಯಾತೀತ ಸಮಾನ ಸಮಾಜವನ್ನು ನಿರ್ಮಿಸಲು ಸಂವಿಧಾನದ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಐಎಎಸ್ ಕೆಎಎಸ್ ಅಧಿಕಾರಿಗಳು ಕಣ್ಣು ಮತ್ತು ಕಿವಿಗಳಿದ್ದಂತೆ, ಸರಕಾರದ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವ ಶಪಥವನ್ನು ಅಧಿಕಾರಿಗಳು ಮಾಡಬೇಕು. ಸರಕಾರದ ಆಡಳಿತ ಸೇವೆ ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

Views: 0

ಪ್ರತಿಯೊಬ್ಬ ಅಧಿಕಾರಿ ಸಂವಿಧಾನದ ಚೌಕಟ್ಟಿನೊಳಗೆ ಸಂವಿಧಾನದ ದೈಯೋದ್ದೇಶಗಳನ್ನು ಅರಿತು ಕಾರ್ಯನಿರ್ವಹಿಸಬೇಕು. ವಿದ್ಯಾವಂತರಾದ ಅಧಿಕಾರಿಗಳು ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಯನ್ನು ಕರ್ತವ್ಯ ನಿರ್ವಹಿಸುವ ಮೂಲಕ ಜಾತ್ಯತೀತ ಹಾಗೂ ಸಮಾನ ಸಮಾಜವನ್ನು ನಿರ್ಮಿಸಬಹುದಾಗಿದೆ.ಎಂದರು.

ಅವರು ಇಂದು ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್ ಅವರೊಂದಿಗೆ ಕೆಎಎಸ್ ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ರಾಜಕಾರಣಿಗಳು ಕಾನೂನು ಹಾಗೂ ನೀತಿಗಳನ್ನು ರೂಪಿಸಿದರೆ, ಅವುಗಳನ್ನು ಜಾರಿಗೊಳಿಸುವುದು ಅಧಿಕಾರಿಗಳು. ಅಧಿಕಾರಿಗಳು ಜನರ ಮತ್ತು ಸರ್ಕಾರ ನಡುವೆ ಸೇತುವೆಯಾಗಿ ಕೆಲಸ ಮಾಡುತ್ತಾರೆ. ಅಧಿಕಾರಿಗಳು ಪ್ರಮುಖವಾಗಿ ಜನಪರವಾಗಿ ಕೆಲಸ ಮಾಡಿದರೆ ಸರಕಾರಕ್ಕೆ ಒಳ್ಳೆ ಹೆಸರು ಬರುತ್ತದೆ.

ಸರಕಾರದ ಅಧಿಕಾರಿಗಳು ಹಾಗೂ ಸರಕಾರಿ ನೌಕರರು ಬಡವ ವಿರೋಧಿ, ಜನವಿರೋಧಿ, ಭ್ರಷ್ಟಾಚಾರದಲ್ಲಿ ತೊಡಗಬಾರದು. ಜಾತಿ ಧರ್ಮಗಳ ಕಲಹಗಳಲ್ಲಿಯೂ ಇರಬಾರದು. ಧರ್ಮಕ್ಕೂ ಆಡಳಿತಕ್ಕೂ ಸಂಬಂಧವೇ ಇಲ್ಲ ಎಂದರು.

ಸಂವಿಧಾನವನ್ನು ನಾವು ರಕ್ಷಿಸಿದರೆ ಸಂವಿಧಾನ ದೇಶವನ್ನು ರಕ್ಷಿಸುತ್ತದೆ. ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಒಬ್ಬ ವ್ಯಕ್ತಿ ಒಬ್ಬ ಮತ ಎಂದಿದೆ. ಆದರೆ ಆರ್ಥಿಕ ಸಾಮಾಜಿಕವಾಗಿ ಈ ಸಮಾನತೆ ಇಲ್ಲ ಸ್ವಾತಂತ್ರ್ಯ ವನ್ನು ದ್ವಂಸಗೊಳಿಸುವ ಸಾಧ್ಯತೆ ಇದೆ ಎಂದರು.

ಸಮಾರಂಭದಲ್ಲಿ ಕಂದಾಯ ಸಚಿವ ಕೃಷ್ಣಭೈರೆಗೌಡ, ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಡಾ. ಇವಿ ರಮಣರೆಡ್ಡಿ, ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷ ರವಿ ತಿರ್ಲಾಪುರ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Back to top button
error: Content is protected !!