ಪ್ರಜ್ವಲ್ ಚುನಾವಣೆಯಲ್ಲಿ ಗೆದ್ದರೆ ಸಂಸದ ಸ್ಥಾನ ಉಳಿಯುವುದೆ? ಕಾನೂನು ಹೇಳುವುದೇನು?

Views: 64
ಲೈಂಗಿಕ ದೌರ್ಜನ್ಯ ಆರೋಪದಡಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಚುನಾವಣೆಯಲ್ಲಿ ಸಂಸದ ಸ್ಥಾನ ಗೆದ್ದರೆ ಸಂಸದ ಸ್ಥಾನ ಉಳಿಯುವುದೆ? ಬಂಧನದಲ್ಲಿದ್ದು ಪ್ರಮಾಣವಚನ ಸ್ವೀಕರಿಸಲು ಅವಕಾಶವಿದೆಯೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.
ಕಾನೂನು ತಜ್ಞರ ಪ್ರಕಾರ, ಪ್ರಜ್ವಲ್ ರೇವಣ್ಣ ಮತ್ತೆ ಸಂಸದನಾಗಿ ಆಯ್ಕೆಯಾದರೆ ಪ್ರಮಾಣವಚನ ಸ್ವೀಕರಿಸುವುದು ಮತ್ತು ಸಂಸದ ಹುದ್ದೆಯಲ್ಲಿ ಮುಂದುವರಿಯುವುದಕ್ಕೆ ಕಾನೂನಿನ ಯಾವ ಅಡತಡೆಯೂ ಇಲ್ಲ. ಆರೋಪ ಹೊತ್ತವರನ್ನು ಚುನಾಯಿತ ಪ್ರತಿನಿಧಿಯ ಸ್ಥಾನದಿಂದ ಅನರ್ಹಗೊಳಿಸುವ ಕಾನೂನು ದೇಶದಲ್ಲಿ ಇಲ್ಲದಿರುವುದರಿಂದ ಅಬಾಧಿತವಾಗಿ ಸಂಸದ ಸ್ಥಾನದಲ್ಲಿ ಮುಂದುವರಿಯಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಪ್ರಜಾಪ್ರಾತಿನಿಧ್ಯ ಕಾಯ್ದೆ ಏನು ಹೇಳುತ್ತೆ?
ಪ್ರಜಾಪ್ರಾತಿನಿಧ್ಯ ಕಾಯ್ದೆ–1951ರ ಅಡಿಯಲ್ಲಿ ಸಂಸತ್ ಮತ್ತು ವಿಧಾನಮಂಡಲದ ಚುನಾವಣೆಗಳು ನಡೆಯುತ್ತವೆ. ಈ ಕಾಯ್ದೆಯ ಸೆಕ್ಷನ್ 8ರ ಪ್ರಕಾರ, ಸಂಸದ ಅಥವಾ ಶಾಸಕರಾಗಿ ಆಯ್ಕೆಯಾದವರು ಕೆಲವು ನಿರ್ದಿಷ್ಟ ಅಪರಾಧಗಳು ಸಾಬೀತಾಗಿ ಎರಡು ವರ್ಷಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಗೆ ಗುರಿಯಾದರೆ ಮಾತ್ರ ಅವರನ್ನು ಅನರ್ಹಗೊಳಿಸಬಹುದು.
ಎರಡು ವರ್ಷಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಗೆ ಗುರಿಯಾಗುವ ಚುನಾಯಿತ ಪ್ರತಿನಿಧಿಗಳನ್ನು ಮಾತ್ರವೇ ಅನರ್ಹಗೊಳಿಸಲು ನಮ್ಮ ಕಾನೂನಿನಲ್ಲಿ ಅವಕಾಶವಿದೆ. ಪ್ರಜ್ವಲ್ ರೇವಣ್ಣ ಮರು ಆಯ್ಕೆಯಾದರೆ ಅದೇ ಹುದ್ದೆಯಲ್ಲಿ ಮುಂದುವರಿಯಬಹುದೆಂದು ಕಾನೂನು ತಜ್ಞರ ಅಭಿಪ್ರಾಯ
ಅಪರಾಧಿ ಎಂದು ಸಾಬೀತಾಗಿ, ಶಿಕ್ಷೆಯ ಪ್ರಮಾಣ ಪ್ರಕಟವಾಗುವವರೆಗೂ ಸಂಸದ ಸ್ಥಾನಕ್ಕೆ ಯಾವ ತೊಂದರೆಯೂ ಇರದು






