ಪ್ರತಿಷ್ಠಿತ ಮಠಕ್ಕೆ ಸೇರಿದ ಶಾಲೆಯಲ್ಲಿ ಶಿಕ್ಷಕನ ನೀಚ ಕೃತ್ಯ: ಶಿಕ್ಷಕನ ಬಂಧನ
Views: 80
ಕನ್ನಡ ಕರಾವಳಿ ಸುದ್ದಿ: ಖಾಸಗಿ ಶಾಲೆಯಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಗಂಭೀರ ಆರೋಪ ತಾಲೂಕಿನ ಭರಮಸಾಗರ ಗ್ರಾಮದಲ್ಲಿ ಕೇಳಿಬಂದಿದೆ. ಪ್ರತಿಷ್ಠಿತ ಮಠವೊಂದಕ್ಕೆ ಸೇರಿದ ಶಾಲೆಯಲ್ಲಿ ಶಿಕ್ಷಕ ನೀಚ ಕೃತ್ಯ ಎಸಗಿದ್ದಾನೆ. ಸುಮಾರು 6 ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೋಣೆಗೆ ಕರೆದು ಶಿಕ್ಷಕ ದುಷ್ಕೃತ್ಯ ಎಸಗಿದ್ದಾನೆ. ವಿಷಯ ತಿಳಿದು ಆಘಾತಕ್ಕೊಳಗಾದ ಶಾಲಾ ಆಡಳಿತ ಮಂಡಳಿಯು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಕಾನೂನು ಕ್ರಮಕ್ಕೆ ಮುಂದಾಗಿದೆ.
ಶಾಲೆಯ ಆಡಳಿತ ಸಮಿತಿಯು ವಿದ್ಯಾರ್ಥಿನಿಯರ ಹಿತದೃಷ್ಟಿಯಿಂದ ಭರಮಸಾಗರ ಪೊಲೀಸ್ ಠಾಣೆಗೆ ತೆರಳಿ ಶಿಕ್ಷಕ ರಂಗಣ್ಣನ ವಿರುದ್ಧ ದೂರು ನೀಡಿದೆ. ಈ ಹಿನ್ನೆಲೆಯಲ್ಲಿಆರೋಪಿ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬಂಧಿತ ಶಿಕ್ಷಕನ ವಿರುದ್ಧ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಫೋಕ್ಸೊ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಸಂತ್ರಸ್ತ ವಿದ್ಯಾರ್ಥಿನಿಯರಿಂದ ಮಾಹಿತಿ ಸಂಗ್ರಹಿಸಿದ್ದಾರೆ.






