ಇತರೆ
ಪ್ರತ್ಯೇಕ ಎರಡು ಅಪಘಾತ.. ನಾಲ್ವರು ಸಾವು

Views: 0
ಕಲಬುರಗಿ: ಆಟೋ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಆಟೋದಲ್ಲಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ಕಲಬುರಗಿ ಹೊರವಲಯ ಸೆಂಟ್ರಲ್ ಜೈಲ್ ಬಳಿ ನಡೆದಿದೆ.
ರಾಯಚೂರು ಇಂದ ಕಲಬುರಗಿಗೆ ಬರುತ್ತಿದ್ದ ಸಾರಿಗೆ ಬಸ್ ಪ್ರಯಾಣಿಕರಿಬ್ಬ ಆಟೋಗೆ ಡಿಕ್ಕಿ ಹೊಡೆದಿದೆ. ಮೃತರ ಗುರುತು ಇನ್ನು ಪತ್ತೆ ಆಗಿಲ್ಲ. ಕಲಬುರಗಿ ಸಂಚಾರಿ 1 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ತುಮಕೂರಿನಲ್ಲೊಂದು ರಸ್ತೆ ಅಪಘಾತ ಸಂಭವಿಸಿದ್ದು, ಸ್ಕೂಟಿಯಲ್ಲಿದ್ದ ಬಾಲಕರಿಗೆ ಇನೋವಾ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಅಪ್ರಾಪ್ತರು ಬಲಿಯಾಗಿದ್ದಾರೆ.
ಪ್ರಥಮ್(15) ವಿಜಯ್ (15) ಮೃತಪಟ್ಟಿದ್ದಾರೆ. ಕಳೆದ ರಾತ್ರಿ ತುಮಕೂರಿನ ಶೆಟ್ಟಿಹಳ್ಳಿ ವೃತ್ತದ ಬಳಿ ಈ ದುರಂತ ಸಂಭವಿಸಿದ್ದು, ಮೃತ ಬಾಲಕರು ಕೌತಮಾರನಹಳ್ಳಿಯ ನಿವಾಸಿಗಳು ಎಂದು ಗುರುತಿಸಲಾಗಿದೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






