ಪ್ರಧಾನ ಮಂತ್ರಿ ನರೇಂದ್ರ ಮೋದಿ ಎ.14 ರಂದು ಕರ್ನಾಟಕಕ್ಕೆ ರೋಡ್ ಶೋ, ಸಮಾವೇಶ.. ಎಲ್ಲೆಲ್ಲಿ.?

Views: 79
ಬೆಂಗಳೂರು, ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ. ಏಪ್ರಿಲ್ 14ರಂದು ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ
ಏಪ್ರಿಲ್ 14ಕ್ಕೆ ಬೆಂಗಳೂರಿಗೆ ಆಗಮಿಸಲಿರುವ ನರೇಂದ್ರ ಮೋದಿ, ಮೊದಲಿಗೆ ಮಧ್ಯಾಹ್ನ 3 ಗಂಟೆಗೆ ಡಾ ಕೆ ಸುಧಾಕರ್ ಪರ ಕ್ಷೇತ್ರ ಚಿಕ್ಕಬಳ್ಳಾಪುರ ಆಯೋಜಿಸಲಾಗಿದೆ. ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಮಾವೇಶ ಮುಗಿದ ನಂತರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದು, ಸಂಜೆ ಶೋಭಾ ಕರಂದ್ಲಾಜೆ ಕ್ಷೇತ್ರವಾದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದಾರೆ.
ಬ್ಯಾಟರಾಯನಪುರ ಮತ್ತು ಹೆಬ್ಬಾಳ ಕ್ಷೇತ್ರ ಒಳಗೊಂಡಂತೆ ರೋಡ್ ಶೋವನ್ನು ಆಯೋಜನೆ ಮಾಡಲಾಗಿದೆ. ಈ ಸಂಬಂಧ ರಾಜ್ಯ ಬಿಜೆಪಿಯು ಇಂದು ರೋಡ್ ಮ್ಯಾಪ್ ಅನ್ನು ಸಿದ್ಧಪಡಿಸಲಿದೆ.
ಏಪ್ರಿಲ್ 14ರಂದು ರಾಜ್ಯದಲ್ಲಿ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ. ದೇವನಹಳ್ಳಿ ಬಳಿ ಬಿಜೆಪಿ ಸಮಾವೇಶದಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಮೋದಿ ಕಾರ್ಯಕ್ರಮಕ್ಕೆ 2 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ.







