ಯುವಜನ

ಪ್ರವಾಸಕ್ಕೆಂದು ಕೊಡಗಿಗೆ ಬಂದಿದ್ದ ಯುವತಿ ಹೋಂಸ್ಟೇ ಬಾತ್‌ರೂಮಿನಲ್ಲಿ ಸಾವು

Views: 84

ಕನ್ನಡ ಕರಾವಳಿ ಸುದ್ದಿ: ಪ್ರವಾಸಕ್ಕೆಂದು ಕೊಡಗಿಗೆ ಬಂದಿದ್ದ ಮೈಸೂರು ಮೂಲದ ಯುವತಿಯೊಬ್ಬಳು ತಂಗಿದ್ದ ಹೋಂಸ್ಟೇಯ ಬಾತ್‌ರೂಮಿನಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಕೊಡಗಿನ ಸೋಮವಾರಪೇಟೆಯಲ್ಲಿ ನಡೆದಿದೆ.

ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆಯ ನಿವಾಸಿಗಳಾದ ಜಗನ್ನಾಥ್ ಹಾಗೂ ರೇಣುಕಾ ದಂಪತಿಯ ಪುತ್ರಿ ವಿನೂತ (27) ಮೃತಪಟ್ಟ ದುರ್ದೈವಿ. ವಿನೂತ ಕೊಡಗು ಪ್ರವಾಸಕ್ಕಾಗಿ ಆಗಮಿಸಿ ಸೋಮವಾರಪೇಟೆಯ ಚೌಡ್ಲು ಗ್ರಾಮದಲ್ಲಿರುವ ಹೋಂಸ್ಟೇಯೊಂದರಲ್ಲಿ ತಂಗಿದ್ದರು. ಬೆಳಿಗ್ಗೆ ಸ್ನಾನ ಮಾಡಲು ಬಾತ್‌ರೂಮಿಗೆ ತೆರಳಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ.

ಬಾತ್‌ರೂಮಿನಲ್ಲಿ ಗ್ಯಾಸ್‌ ಗೀಸರ್‌ನಿಂದ ಅನಿಲ ಸೋರಿಕೆಯಾಗಿದ್ದು, ಅಲ್ಲಿ ಯಾವುದೇ ಕಿಟಕಿ ಅಥವಾ ವೆಂಟಿಲೇಷನ್ ವ್ಯವಸ್ಥೆ ಇಲ್ಲದ ಕಾರಣ ಉಸಿರಾಡಲು ಸಾಧ್ಯವಾಗದೆ ವಿನೂತ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ ಎಂದು ಹೇಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸೋಮವಾರಪೇಟೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related Articles

Back to top button
error: Content is protected !!