ಶಿಕ್ಷಣ
ಪ್ರಾಂಶುಪಾಲರ ಕಿರುಕುಳ, ತರಗತಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಉಪನ್ಯಾಸಕಿ!

Views: 143
ಬೆಂಗಳೂರು: ಉಪನ್ಯಾಸಕಿಯೊಬ್ಬರು ತರಗತಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಿಲಕ್ ನಗರದ ಖಾಸಗಿ ಪಿಯು ಕಾಲೇಜಿನಲ್ಲಿ ನಡೆದಿದೆ.
ಇಂಗ್ಲೀಷ್ ಉಪನ್ಯಾಸಕಿ ಶಬಾನ (44) ಕ್ಲಾಸ್ ರೂಮ್‌ನಲ್ಲೇ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿಬಂದಿದೆ.
ಇಂದು ಕಾಲೇಜಿಗೆ ಬಂದಿದ್ದ ಶಬಾನ ಬೆಳಿಗ್ಗೆ ಪ್ರಾಂಶುಪಾಲರ ಕೊಠಡಿಗೆ ತೆರಳಿ ಮಾತನಾಡಿ ಹೊರಬಂದಿದ್ದರು. ಇದಾದ ಕೆಲ ಹೊತ್ತಿನ ಬಳಿಕ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.