ಶಿಕ್ಷಣ
ಪ್ರಾಥಮಿಕ, ಪ್ರೌಢಶಾಲೆಗಳಿಗೆ ಈ ಜಿಲ್ಲೆಯಲ್ಲಿ ದಸರಾ ರಜೆ ವಿಸ್ತರಣೆ: ಅ.23ರಿಂದ ಎಂದಿನಂತೆ ತರಗತಿಗಳು ಆರಂಭ!
Views: 144
ಕನ್ನಡ ಕರಾವಳಿ ಸುದ್ದಿ: ಮಂಗಳೂರಿನಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆಯ ಅವಧಿಯಲ್ಲಿ ಮತ್ತೊಂದು ದಿನದ ಬಿಡುವು ಸಿಕ್ಕಿದೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಅಕ್ಟೋಬರ್ 22ರಂದು ರಜೆ ಮುಂದುವರಿಸಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಆದೇಶ ಹೊರಡಿಸಿದ್ದು, ಒಂದರಿಂದ ಹತ್ತನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಈ ರಜೆ ಅನ್ವಯವಾಗಲಿದೆ. ದಸರಾ ಹಬ್ಬದ ಹಿನ್ನೆಲೆಯಲ್ಲಿ ರಜೆಯನ್ನು ವಿಸ್ತರಿಸಿರುವುದರಿಂದ ಜಿಲ್ಲೆಯ ಶಾಲಾ ವಿದ್ಯಾರ್ಥಿಗಳು ಗುರುವಾರವೂ ಶಾಲೆಗೆ ತೆರಳುವ ಅಗತ್ಯವಿಲ್ಲ.
ಅಕ್ಟೋಬರ್ 23ರಿಂದ ಶಾಲೆಗಳು ಎಂದಿನ ವೇಳಾಪಟ್ಟಿಯಂತೆ ಕಾರ್ಯನಿರ್ವಹಿಸಲಿವೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆ ಪುನರಾರಂಭದ ದಿನಾಂಕವನ್ನು ಗಮನದಲ್ಲಿಟ್ಟುಕೊಳ್ಳಬೇಕು.ಶಾಲಾ ಶಿಕ್ಷಣ ಇಲಾಖೆಯ ಈ ಆದೇಶವು ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಸಂಬಂಧಿಸಿದೆ.






