ಪ್ರಿಯಕರನೊಬ್ಬ ಮಹಿಳೆಯ ಹತ್ಯೆಗೈದು ತಾನು ಆತ್ಮಹತ್ಯೆಗೆ ಶರಣು

Views: 97
ಕನ್ನಡ ಕರಾವಳಿ ಸುದ್ದಿ :ಪ್ರಿಯಕರನೊಬ್ಬ ವಿವಾಹಿತ ಮಹಿಳೆಯ ಹತ್ಯೆಗೈದ ಬಳಿಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ.
ಮಹಿಳೆಗೆ 9 ಸಲ ಚಾಕುವಿನಿಂದ ಚುಚ್ಚಿ ಬಳಿಕ ಪ್ರಿಯಕರ ತಾನು ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಕೊಲೆಯಾದ ಮಹಿಳೆಯನ್ನು ಖಾನಾಪುರ ತಾಲೂಕಿನ ಬೀಡಿ ಗ್ರಾಮದ ರೇಷ್ಮಾ ತೀರವಿರ (29) ಎಂದು ಗುರುತಿಸಲಾಗಿದ್ದು, ಅದೇ ಚಾಕುವಿನಿಂದ ಚುಚ್ಚಿಕೊಂಡು ಆನಂದ ಸುತಾರ್ (31) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರೇಷ್ಮಾ ಹಾಗು ಆನಂದ್ ಕಳೆದ 10 ವರ್ಷಗಳಿಂದ ಒಂದೇ ಕಾಲೋನಿಯಲ್ಲಿ ಇದ್ದರು. ಇಬ್ಬರು ಮಧ್ಯ ಹಲವು ವರ್ಷಗಳಿಂದ ಸ್ನೇಹವಿತ್ತು. ಆನಂದ್‌ಗೆ ಮದುವೆಯಾಗಿ ಮೂವರು ಮಕ್ಕಳಿದ್ದಾರೆ. ರೇಷ್ಮಾಗೆ ಇಬ್ಬರು ಮಕ್ಕಳಿದ್ದಾರೆ. ಮದುವೆಯ ಬಳಿಕವು ಆನಂದ್ ಮತ್ತು ರೇಷ್ಮಾ ನಡುವೆ ಅನೈತಿಕ ಸಂಬಂಧ ಇತ್ತು. ಕಳೆದ ತಿಂಗಳಷ್ಟೇ ರೇಷ್ಮಾ ಪತಿಯ ಕೈಗೆ ಆಕೆ ಹಾಗೂ ಆನಂದ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದರು. ನಂದಗಡ ಪೊಲೀಸರಿಗೆ ಈ ಕುರಿತು ರೇಷ್ಮಾ ಪತಿ ಶಿವು ತಿರವಿರ ಮಾಹಿತಿ ನೀಡಿದ್ದಾರೆ. ಪೊಲೀಸರು ವಾರ್ನಿಂಗ್ ನೀಡಿದ ಬಳಿಕ ಆನಂದನಿಂದ ರೇಷ್ಮಾ ಅಂತರ ಕಾಯ್ದುಕೊಂಡಿದ್ದಾಳೆ. ಇದರಿಂದ ಸಿಟ್ಟಿಗೆದ್ದು ಮನೆಯ ಹಿಂಬಾಗಲಿನಿಂದ ಹೋಗಿ ರೇಷ್ಮಾಳನ್ನು ಆನಂದ ಭೀಕರವಾಗಿ ಕೊಲೆ ಮಾಡಿದ್ದಾನೆ. ರೇಷ್ಮಾ ಪುತ್ರಿಯ ಎದುರೇ ಹತ್ಯೆ ಮಾಡಿದ್ದಾನೆ. ಆನಂದ್ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಘಟನೆ ಕುರಿತು ನಂದಗಡ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.