ಪ್ರೀತಿಯ ಬಲೆಗೆ ಬಿದ್ದು ಅಪ್ರಾಪ್ತ ವಿದ್ಯಾರ್ಥಿನಿ ಗರ್ಭಿಣೆ:ಪ್ರಿಯಕರ ಎಸ್ಕೇಪ್
Views: 43
ಕನ್ನಡ ಕರಾವಳಿ ಸುದ್ದಿ: ಪ್ರೀತಿಯ ಬಲೆಗೆ ಬಿದ್ದ 17 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಪ್ರಿಯಕರ ಕರಿಯಣ್ಣನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದ್ದು, ಆರೋಪಿ ಎಸ್ಕೇಪ್ ಆಗಿದ್ದಾನೆ.
ಮಾಹಿತಿಯ ಪ್ರಕಾರ, ಅಪ್ರಾಪ್ತ ಬಾಲಕಿ ಹಾಸ್ಟೆಲ್‌ನಲ್ಲಿದ್ದುಕೊಂಡು ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಈ ವೇಳೆ ಕರಿಯಣ್ಣ ಎಂಬ ಗೂಡ್ಸ್ ವಾಹನ ಚಾಲಕನನ್ನ ಪ್ರೀತಿಸುತ್ತಿದ್ದಳು. ಬಳಿಕ ಬಾಲಕಿ ಗರ್ಭಿಣಿಯಾಗಿರೋದು ತಿಳಿದು ಬಾಲಕಿ ತಾಯಿ ಹಿರಿಯೂರು ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ದು ಹೆರಿಗೆ ಮಾಡಿಸಿದ್ದಾರೆ. ಆಸ್ಪತ್ರೆಯಲ್ಲಿ ಅಪ್ರಾಪ್ತ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ಬಾಲಕಿ ಅಪ್ರಾಪ್ತೆ ಎಂಬುದು ತಿಳಿದ ತಕ್ಷಣ ಆಸ್ಪತ್ರೆ ಸಿಬ್ಬಂದಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಗಂಭೀರತೆ ಗಮನಿಸಿ ಹಿರಿಯೂರು ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಬಾಲಕಿಯ ಪ್ರಿಯಕರ ಕರಿಯಣ್ಣ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇತ್ತ ಕೇಸ್ ದಾಖಲಾಗುತ್ತಿದ್ದಂತೆಯೇ ಆತ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಇನ್ನೂ ಬಾಲಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ‘ಸಖಿ ಕೇಂದ್ರ’ಕ್ಕೆ ಸ್ಥಳಾಂತರಿಸಿ ಆರೈಕೆ, ಕೌನ್ಸೆಲಿಂಗ್ ಹಾಗೂ ಕಾನೂನು ನೆರವು ಒದಗಿಸಲಾಗುತ್ತಿದೆ. ಈ ಸಂಬಂಧ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.






