ಯುವಜನ
ಪ್ರೀತಿಸಿದವನ ಜೊತೆ ಮದುವೆಗೆ ಮನೆಯವರ ವಿರೋಧ: ಯುವತಿ ಆತ್ಮಹತ್ಯೆ
Views: 23
ಕನ್ನಡ ಕರಾವಳಿ ಸುದ್ದಿ: ಯುವತಿ ತಾನು ಪ್ರೀತಿಸಿದವನ ಜೊತೆಗೆ ಮದುವೆ ಮಾಡಲು ಮನೆಯವರು ನಿರಾಕರಿಸಿದ್ದಾರೆ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಫಟನೆ ಧಾರವಾಡದಲ್ಲಿ ನಡೆದಿದೆ.
ಶ್ವೇತಾ ಕೊಟೆನ್ನವರ್(18) ಆತ್ಮಹತ್ಯೆಗೆ ಶರಣಾದ ಯುವತಿ. ಈಕೆ ಹಲವು ವರ್ಷಗಳಿಂದ ಹುಬ್ಬಳ್ಳಿ ತಾಲೂಕಿನ ಕೆರೆಸೂರ ಗ್ರಾಮದ ನಾಗರಾಜ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಈ ವಿಷಯವನ್ನು ತನ್ನ ಕುಟುಂಬಸ್ಥರಿಗೆ ತಿಳಿಸಿ, ಆತನನ್ನೇ ಮದುವೆಯಾಗುವ ಇಂಗಿತ ವ್ಯಕ್ತಪಡಿಸಿದ್ದಳು.
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ ಕಾರಣ ಮನನೊಂದ ಶ್ವೇತಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






