ಯುವಜನ

ಪ್ರೀತಿಸಿದ ಯುವತಿ‌‌ ಬೇರೊಬ್ಬನ‌ ಜತೆ ಸಂಬಂಧ: ವಿಡಿಯೋ ಮಾಡಿಟ್ಟು ಯುವಕ ಆತ್ಮಹತ್ಯೆ

Views: 105

ಕನ್ನಡ ಕರಾವಳಿ ಸುದ್ದಿ: ಪ್ರೀತಿಸಿದ ಯುವತಿ‌‌ಯ ಕಿರುಕುಳ ತಾಳಲಾರದೆ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ವಿಡಿಯೋ ಮಾಡಿರುವ ಮಂಜುನಾಥ್, ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇದೀಗ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪ್ರೀತಿಸಿದ ಯುವತಿ ಗಗನ ವಿರುದ್ಧ ಕಿರುಕುಳ ಆರೋಪ ಮಾಡಿರುವ ಮಂಜುನಾಥ್, ಆಕೆಗೆ ಬೇರೊಬ್ಬನ‌ ಜತೆ ಸಂಬಂಧವಿತ್ತು ಎಂದು ವಿಡಿಯೋದಲ್ಲಿ ಹೇಳಿದ್ದಾನೆ. ಅಷ್ಟೇ ಅಲ್ಲದೆ ಯುವತಿಯ ಕುಟುಂಬಸ್ಥರ ವಿರುದ್ಧ ಕೂಡ ಕಿರುಕುಳ ಆರೋಪ ಮಾಡಿದ್ದು, ನನಗೆ ನ್ಯಾಯ ಕೊಡಿಸುವಂತೆ ಹೇಳಿದ್ದಾರೆ.

ಮಾತ್ರೆ ಸೇವಿಸಿದ್ದ ಮಂಜುನಾಥ್ನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮೊಬೈಲ್ ಪಾಸ್ವರ್ಡ್ ಸಮೇತ ಯುವಕ ಸೆಲ್ಫಿ ವಿಡಿಯೋ ಮಾಡಿದ್ದಾನೆ. ಇತ್ತ ಪ್ರಕರಣ ದಾಖಲಾಗುತ್ತಿದ್ದಂತೆ ಯುವತಿ ಮತ್ತು ಆಕೆ ಕುಟುಂಬಸ್ಥರು ನಾಪತ್ತೆ ಆಗಿದ್ದಾರೆ ಎಂದು ತಿಳಿದುಬಂದಿದೆ.

Related Articles

Back to top button