ಇತರೆ
ಪ್ರೀ-ವೆಡ್ಡಿಂಗ್ ಫೋಟೋ ಶೂಟ್‌ಗಾಗಿ ಬಂದಿದ್ದ ಫೋಟೋಗ್ರಾಫರ್ ತಂಡದ ಮೇಲೆ ಹಲ್ಲೆ!
Views: 59
ಕನ್ನಡ ಕರಾವಳಿ ಸುದ್ದಿ: ದೇವಸ್ಥಾನದ ಬಳಿ ಪ್ರೀ ವೆಡ್ಡಿಂಗ್ ಶೂಟಿಂಗ್ ನಡೆಸುತ್ತಿದ್ದ ಫೋಟೋಗ್ರಾಫರ್‌ಗಳ ಮೇಲೆ ಸ್ಥಳೀಯ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಸಕಲೇಶಪುರದ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ದೇವಾಲಯದ ಆವರಣದಲ್ಲಿ ನಿಯಮ ಉಲ್ಲಂಘಿಸಿ ಚಪ್ಪಲಿ, ಶೂ ಧರಿಸಿ ಫೋಟೋಶೂಟ್ ಮಾಡಿದ್ದೇ ಸ್ಥಳೀಯರ ಆಕ್ರೋಶಕ್ಕೆ ಕಾರಣ ಎಂದು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕೇಂದ್ರವಾದ ಸಕಲೇಶಪುರದ ಬೆಟ್ಟದ ಭೈರವೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರೀ-ವೆಡ್ಡಿಂಗ್ ಫೋಟೋ ಶೂಟ್‌ಗಾಗಿ ಬಂದಿದ್ದ ತಂಡದ ಮೇಲೆ ಸ್ಥಳೀಯ ಯುವಕರು ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.






