ಯುವಜನ

ಪ್ರೇಯಸಿ ಆತ್ಮಹತ್ಯೆ ಸುದ್ದಿ ತಿಳಿದು ಪ್ರಿಯಕರನೂ ನೇಣಿಗೆ ಶರಣು 

Views: 120

ಕನ್ನಡ ಕರಾವಳಿ ಸುದ್ದಿ,: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಪ್ರಿಯಕರನೂ ನೇಣಿಗೆ ಶರಣಾಗಿರುವ ದಾರುಣ ಘಟನೆ ರಬಕವಿಬನಹಟ್ಟಿಯ ಅಸ್ಕಿ ಗ್ರಾಮ ಹಾಗೂ ಬನಹಟ್ಟಿಯಲ್ಲಿ ನಡೆದಿದೆ.

ಪವಿತ್ರಾ ಒಂಟಿ (19), ಕಾರ್ತಿಕ್ ನಾಯಕ್(19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಪವಿತ್ರಾ ಬನಹಟ್ಟಿಯ ಕೆಹೆಚ್‌ಡಿಸಿ ಕಾಲೋನಿ ನಿವಾಸಿಯಾಗಿದ್ದಳು. ನಿನ್ನೆ ಇವರಿಬ್ಬರ ಮಧ್ಯೆ ವೈಮನಸ್ಸಿನಿಂದ ಜಗಳ ನಡೆದಿತ್ತು. ಇದಾದ ಬಳಿಕ ಮನನೊಂದು ಪವಿತ್ರಾ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ.

ಇವರಿಬ್ಬರು ಪ್ರೇಮಿಗಳಾಗಿದ್ದು, ಮಂಗಳವಾರ ಇವರಿಬ್ಬರ ಮಧ್ಯೆ ವೈಮನಸ್ಸಿನಿಂದ ಜಗಳ ನಡೆದಿತ್ತು.ಇದರಿಂದ ಮನನೊಂದು ಪವಿತ್ರಾ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಸುದ್ದಿ ಕೇಳಿದ ಕಾರ್ತಿಕ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಬೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Related Articles

Back to top button
error: Content is protected !!