ಕರಾವಳಿ
ಫೆಂಗಾಲ್ ಚಂಡಮಾರುತ ಉಡುಪಿ, ಮಂಗಳೂರು ಪಿಯು ವರೆಗೆ ರಜೆ ಘೋಷಣೆ
Views: 212
ಕನ್ನಡ ಕರಾವಳಿ ಸುದ್ದಿ: ಫೆಂಗಲ್ ಚಂಡಮಾರುತ ಪರಿಣಾಮ ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆ, ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಡಿ.3ರಂದು ರಜೆ ಘೋಷಿಸಲಾಗಿದೆ.ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಜಿಲ್ಲಾಡಳಿತವೂ ಸಹ ಎಲ್ಲ ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುವರೆಗಿನ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಡಿ.3 ರಂದು (ಮಂಗಳವಾರ) ರಜೆ ಘೋಷಿಸಿದೆ.ಎಂದು ಜಿಲ್ಲಾಧಿಕಾರಿ ವಿದ್ಯಾಕುಮಾರಿ ರಜೆ ಘೋಷಿಸಿ ಆದೇಶ ನೀಡಿದ್ದಾರೆ. ಈಗಾಗಲೇ ಮಳೆಯಾಗುತ್ತಿದ್ದು ಮಂಗಳವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಸಾರ್ವಜನಿಕರು ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.