ಫೆಬ್ರವರಿಯಲ್ಲಿ ಜಿಲ್ಲಾಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆ

Views: 362
ಬೆಂಗಳೂರು: ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಫೆಬ್ರವರಿ ವೇಳೆಗೆ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ಸದ್ಯದಲ್ಲೇ ನಡೆಯಲಿದೆ ಎನ್ನುವುದು ನಿಜ ಅದನ್ನು ತಡೆಯಲು ಆಗುವುದಿಲ್ಲ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದ್ದು, ಫೆಬ್ರವರಿ ವೇಳೆಗೆ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು
ರಾಜ್ಯದಲ್ಲಿ 2019-20 ರಿಂದ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆದಿಲ್ಲ ಚುನಾವಣೆಯನ್ನು ನಿಗದಿತ ಸಮಯದಲ್ಲಿ ನಡೆಸಲು ಅವಕಾಶ ಮಾಡಿಕೊಡುವಂತೆ. ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ರಾಜ್ಯ ಚುನಾವಣಾ ಆಯೋಗ ಹೈಕೋರ್ಟಿಗೆ ಮೊರೆಹೋಗಿತ್ತು. ಈ ಮಧ್ಯೆ ರಾಜ್ಯ ಚುನಾವಣಾ ಆಯೋಗ ಕ್ಷೇತ್ರ ಪುನರ್ ವಿಂಗಡಣೆ ಮಾಡಿ ಮೀಸಲಾತಿ ಕರಡು ಪ್ರಕಟಿಸಿತು ಆದರೆ ಕೋವಿಡ್ ಕಾರಣದಿಂದಾಗಿ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ
ಈ ಮಧ್ಯೆ ಕ್ಷೇತ್ರ ಪುನರ್ ವಿಂಗಡಣೆ ಕುರಿತು ವ್ಯಾಪಕ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಕ್ಷೇತ್ರ ಮರು ವಿಂಗಡಣೆ ಮತ್ತು ಮೀಸಲಾತಿ ನಿಗದಿ ಪಡಿಸುವ ಅಧಿಕಾರವನ್ನು ಚುನಾವಣಾ ಆಯೋಗದಿಂದ ಕಿತ್ತುಕೊಂಡು ನಿವೃತ್ತ ಐಎಎಸ್ ಅಧಿಕಾರಿ ಎಮ್ ಡಿ ಲಕ್ಷ್ಮಿ ನಾರಾಯಣ ಅವರ ನೇತೃತ್ವದಲ್ಲಿ ಸೀಮಾ ನಿರ್ಣಯ ಆಯೋಗವನ್ನು ರಚಿಸಲಾಗಿತ್ತು ಒಂದುವರೆ ವರ್ಷದ ಬಳಿಕ ಆಯೋಗ ವರದಿ ಸಲ್ಲಿಸಿದ್ದು ಇದರ ಬಗ್ಗೆಯೂ ಇದರ ಬಗ್ಗೆಯೂ ಆಕ್ಷೇಪ ಕೇಳಿ ಬಂದಿದ್ದರಿಂದ ನಿವೃತ್ತ ಐಎಎಸ್ ಅಧಿಕಾರಿ ಎಂ ಆರ್ ಕಾಂಬ್ಳೆ ನೇತೃತ್ವದಲ್ಲಿ ಹೊಸ ಆಯೋಗ ರಚಿಸಲಾಯಿತು. ಒಬಿಸಿ ಗಳಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವ ಸಂಬಂಧ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ ಮೀಸಲಾತಿ ನಿಗದಿಗೆ ನ್ಯಾಯಮೂರ್ತಿ ಭಕ್ತ ವತ್ಸಲ ನೇತೃತ್ವದಲ್ಲಿ ಆಯೋಗ ರಚಿಸಲಾಯಿತು.






