ಫೆ.24 ರಂದು ಉಡುಪಿ ನೂತನ ಬೃಹತ್ ಕೈಮಗ್ಗ ನೇಯ್ಗೆ ಕೇಂದ್ರ ಮತ್ತು ನೇಯ್ಗೆ ತರಬೇತಿ ಉದ್ಘಾಟನೆ

Views: 146
ಉಡುಪಿ: ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ ಉಡುಪಿ, ಪದ್ಮಶಾಲಿ ನೇಕಾರ ಪ್ರತಿಷ್ಠಾನ ಉಡುಪಿ ಇವರ ಸಹಭಾಗಿತ್ವದಲ್ಲಿ ನೇಕಾರರ ಸೇವಾ ಕೇಂದ್ರ ಬೆಂಗಳೂರು, ಕೈಮಗ್ಗ ಮತ್ತು ಜವಳಿ ಇಲಾಖೆ, ನಬಾರ್ಡ್ ರೋಬೋ ಸಾಫ್ಟ್ (ಸಿಎಸ್ ಆರ್ ನಿಧಿ )ಇವರ ಸಹಯೋಗದೊಂದಿಗೆ ಫೆಬ್ರವರಿ 24ರಂದು ಬೆಳಿಗ್ಗೆ 10.30 ಕ್ಕೆ ಉಡುಪಿ ಜಿಲ್ಲಾ ಪಂಚಾಯತ್ ಕಟ್ಟಡ ಬನ್ನಂಜೆಯಲ್ಲಿ “ನೂತನ ಬೃಹತ್ ಕೈಮಗ್ಗ ನೇಯ್ಗೆ ಕೇಂದ್ರ ಮತ್ತು ಮಹಿಳೆಯರಿಗಾಗಿ ಆರು ತಿಂಗಳ ಕೈಮಗ್ಗ ನೇಯ್ಗೆ ತರಬೇತಿ” ಉದ್ಘಾಟನಾ ಸಮಾರಂಭ ನಡೆಯಲಿದೆ.
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಆಹಾರ ಸಂಸ್ಕರಣ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಲಿದ್ದಾರೆ.
ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದೀಪ ಪ್ರಜ್ವಲಿಸಲಿದ್ದಾರೆ.
ಉಡುಪಿ ವಿಧಾನಸಭಾ ಸದಸ್ಯ ಯಶ್ಪಾಲ್ ಸುವರ್ಣ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ, ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್, ಬೆಂಗಳೂರು ನಬಾರ್ಡ್ ಪ್ರಾದೇಶಿಕ ಕಚೇರಿಯ ಚೀಪ್ ಜನರಲ್ ಮ್ಯಾನೇಜರ್ ಟಿ ರಮೇಶ್, ಉಡುಪಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ನಾಗರಾಜ್ ನಾಯಕ್, ರೋಬೋ ಸಾಫ್ಟ್ ಟೆಕ್ನಾಲಜಿಸ್ ಗುಣಮಟ್ಟ ನಿರ್ವಹಣೆಯ ಉಪಾಧ್ಯಕ್ಷರು ಶ್ರೀಧರನ್ ಕೇಶವನ್,
ಉಡುಪಿ ನಬಾಡ್ ಡೆಪ್ಯೂಟಿ ಜನರಲ್ ಮ್ಯಾನೇಜರ್ ಶ್ರೀಮತಿ ಸಂಗೀತ ಕರ್ತ, ಬೆಂಗಳೂರು ನೇಕಾರ ಸೇವಾ ಕೇಂದ್ರದ ಸಹಾಯಕ ನಿರ್ದೇಶಕ ಮಾರಿಮುತ್ತು, ರೋಬೋ ಸಾಫ್ಟ್ ಟೆಕ್ನಾಲಜಿಸ್ ಅಸೋಸಿಯೇಟ್ ಉಪಾಧ್ಯಕ್ಷ ನಂದ ಕಿಶೋರ್ ಕೆ, ಉಡುಪಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಶಿವಶಂಕರ್, ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಅರುಣ್ ಕುಮಾರ್, ಮುಂಬೈ ಹರ್ಷ ಫೌಂಡೇಶನ್ ಕೃಷ್ಣಾನಂದ ಶೆಟ್ಟಿಗಾರ್ ಸಾಲಿಕೇರಿ,
ಉಡುಪಿ ಬಸ್ ಟೆಕ್ನೋಕ್ರಾಟ್ಸ್ ಪ್ರವೇಟ್ ಲಿಮಿಟೆಡ್ ನಿರ್ದೇಶಕರು ಭಗವಾನ್ ದಾಸ್ ಕೆ, ರೋಬೋ ಸಾಫ್ಟ್ ಟೆಕ್ನಾಲಜಿಸ್ ಹೆಚ್ಆರ್ ಮ್ಯಾನೇಜರ್ ಲಕ್ಷ್ಮಿ ರಾಜೀವ ಶೆಟ್ಟಿ. ಭಾಗವಹಿಸಲಿದ್ದಾರೆ ಎಂದು ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ ಹಾಗೂ ಪದ್ಮಶಾಲಿ ನೇಕಾರರ ಪ್ರತಿಷ್ಠಾನ ಉಡುಪಿ ಇದರ ಅಧ್ಯಕ್ಷರಾದ ರತ್ನಾಕರ ಇಂದ್ರಾಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.