ಇತರೆ
ಫ್ಲೈಓವರ್ನಲ್ಲಿ ಬೈಕ್ಗಳ ನಡುವೆ ಡಿಕ್ಕಿ: 40 ಅಡಿ ಎತ್ತರದಿಂದ ಸರ್ವೀಸ್ ರಸ್ತೆಗೆ ಬಿದ್ದ ಸವಾರ!
Views: 39
ಕನ್ನಡ ಕರಾವಳಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನ ಫ್ಲೈಓವರ್ನಿಂದ ಬೈಕ್ನಲ್ಲಿ ಸಾಗುತ್ತಿದ್ದ ವ್ಯಕ್ತಿಯೋರ್ವ ಕೆಳಗೆ ಬಿದ್ದ ಘಟನೆ ಮಂಗಳವಾರ ಮಧ್ಯಾಹ್ನದ ವೇಳೆ ನಡೆದಿದೆ.
ಇಷ್ಟೊಂದು ಎತ್ತರದಿಂದ ಕೆಳಗೆ ಬಿದ್ದ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿರುವುದು ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿದೆ.
ಫ್ಲೈಓವರ್ನಿಂದ ಕೆಳಕ್ಕೆ ಬಿದ್ದ ಬೈಕ್ ಸವಾರ ಸರ್ವೀಸ್ ರಸ್ತೆಗೆ ಬಿದ್ದಿದ್ದಾರೆ. ಅದೃಷ್ಟವಶಾತ್ ಆ ಸಂದರ್ಭದಲ್ಲಿ ರಸ್ತೆಯಲ್ಲಿ ವಾಹನ ಸಂಚಾರ ಇಲ್ಲದ ಕಾರಣ ಅನಾಹುತ ತಪ್ಪಿದೆ. ಸವಾರ ಹೆಲ್ಮೆಟ್ ಧರಿಸಿದ್ದರಿಂದ ತಲೆಗೆ ಯಾವುದೇ ಗಾಯವಾಗಿಲ್ಲ. ಗಾಯಾಳುವನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಸವಾರ ಅತ್ತಾವರದ ನಿವಾಸಿಗಳೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಬಂಟ್ವಾಳ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.






