ಇತರೆ
ಬಂಗಾಳಕೊಲ್ಲಿಯಲ್ಲಿ ಮತ್ತೆ ಚಂಡಮಾರುತ: ಸೆ.7ರವರೆಗೆ ಮಳೆ ಮುನ್ಸೂಚನೆ

Views: 73
ಕನ್ನಡ ಕರಾವಳಿ ಸುದ್ದಿ: ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬುಧವಾರವೂ ವಿವಿಧ ಭಾಗಗಳಲ್ಲಿ ಅಬ್ಬರದ ಮಳೆ ಸುರಿದಿದೆ. ಮಧ್ಯಾಹ್ನದ ವೇಳೆಗೆ ಹಲವು ಭಾಗಗಳಲ್ಲಿ ಭಾರಿ ಮಳೆ ಸುರಿದಿದೆ.
ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ಹಾಗೂ ಒಡಿಶಾ ಕರಾವಳಿ ಸಮೀಪ ಚಂಡಮಾರುತ ಪ್ರಸರಣವುಂಟಾಗಿದ್ದು, ಈ ಭಾಗದಿಂದ ಕರ್ನಾಟಕದ ಮೇಲೆ ಬಿರುಗಾಳಿ ಬೀಸುತ್ತಿದೆ. ಇದರ ಪ್ರಭಾವದಿಂದಾಗಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಕಳೆದೊಂದು ವಾರದಿಂದಲೂ ಸುರಿಯುತ್ತಿರುವ ಮಳೆಯು ಸೆ.7ರವರೆಗೆ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.