ಕರಾವಳಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಚಂಡಮಾರುತ ಸಾಧ್ಯತೆ! 

Views: 0

ಮಂಗಳೂರು: ಬಂಗಾಲ ಕೊಲ್ಲಿಯಲ್ಲಿ ನಿಮ್ನ ಒತ್ತಡ ಉಂಟಾಗಿದ್ದು, ಇದು ನ. 30ರಂದು ವಾಯುಭಾರ ಕುಸಿತವಾಗಿ ಮಾರ್ಪಟ್ಟು ಅನಂತರ ಚಂಡಮಾರುತವಾಗಿ ಪರಿವರ್ತನೆ ಯಾಗುವ ಸಾಧ್ಯತೆ ಇದೆ.

ಅದರ ಕೇಂದ್ರ ಬಿಂದು ದಕ್ಷಿಣ ಅಂಡಮಾನ್‌ನಲ್ಲಿದ್ದು, ಕ್ರಮೇಣ ಅದು ಬಂಗಾಲಕೊಲ್ಲಿಗೆ ಸಾಗಲಿದೆ. ಅದು ಇನ್ನಷ್ಟು ತೀವ್ರಗೊಂಡು ಡಿ.5ರ ವೇಳೆಗೆ ಆಂಧ್ರಪ್ರದೇಶ ಕರಾವಳಿ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಂಡಮಾರುತದಿಂದ ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಉತ್ತಮ ಮಳೆ ಯಾಗುವ ಸಂಭವ ಇದೆ. ಕರ್ನಾಟಕದ ಕೆಲವು ಕಡೆ ಲಘು ಮಳೆಯಾಗಬಹುದು ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಗ್ರಾಮೀಣ ಭಾಗದ ಕೆಲವು ಕಡೆ ಬೆಳಗ್ಗೆ ತುಸು ಚಳಿಯ ವಾತಾವರಣ ಇತ್ತು. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮುಂದಿನ ಎರಡು ದಿನಗಳ ಕಾಲ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮೋಡ ಮತ್ತು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮಂಗಳೂರಿನಲ್ಲಿ ಮಂಗಳವಾರ ಗರಿಷ್ಠ ತಾಪಮಾನ 34 ಡಿ.ಸೆ. ಮತ್ತು ಕನಿಷ್ಠ ತಾಪಮಾನ 24.9 ಡಿ.ಸೆ. ದಾಖಲಾಗಿತ್ತು. ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ ಇನ್ನಷ್ಟು ಏರಿ, ಕನಿಷ್ಠ ತಾಪಮಾನ ಇಳಿಕೆ ಯಾಗುವ ಸಾಧ್ಯತೆ ಇದೆ.

Related Articles

Back to top button
error: Content is protected !!