ಜನಮನ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸೇರಿದಂತೆ ನಾಲ್ಕು ದಿನ ಮಳೆ
Views: 66
ಕನ್ನಡ ಕರಾವಳಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ಮಳೆ ಸುರಿಯುವ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಖ್ಯವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ದಾವಣಗೆರೆಯಲ್ಲಿ ಸಂಜೆ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಂಭವವಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.






