ಕರಾವಳಿ
ಬಂಟ್ವಾಳ:ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಢಿಕ್ಕಿಯಾಗಿ ಯುವತಿ ಮೃತ್ಯು

Views: 0
ಬಂಟ್ವಾಳ: ಕಾರು ಢಿಕ್ಕಿ ಹೊಡೆದು ಪಾದಚಾರಿ ಯುವತಿಯೋರ್ವಳು ಮೃತಪಟ್ಟ ಘಟನೆ ಗುರುವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 75 ರ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.
ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ ( 23) ಮೃತಪಟ್ಟ ಯುವತಿ.
ಮಂಗಳೂರು ಖಾಸಗಿ ಮೆಡಿಕಲ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಸಂಜೆ ಕೆಲಸ ಬಿಟ್ಟು ಮಂಗಳೂರಿನಿಂದ ಬಸ್ ಮೂಲಕ ಊರಿಗೆ ಹೋಗಿದ್ದಳು. ಯುವತಿ ದಾಸಕೋಡಿ ಎಂಬಲ್ಲಿ ಬಸ್ಸ್ ನಿಂದ ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಕಾರು ಢಿಕ್ಕಿ ಹೊಡೆದಿದೆ.
ಢಿಕ್ಕಿಯ ರಭಸಕ್ಕೆ ಯುವತಿ ರಸ್ತೆ ಬದಿಗೆ ಎಸೆಯಲ್ಪಟ್ಟಿದ್ದಾಳೆ. ಕಾರು ಕೂಡ ಪಲ್ಟಿಯಾಗಿದೆ ಎಂದು ಹೇಳಲಾಗಿದೆ.ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.