ಶಿಕ್ಷಣ

ಬಂಟ್ವಾಳ: ಎಸ್ಸೆಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

Views: 84

ಬಂಟ್ವಾಳ:ಎಸ್ಸೆಸೆಲ್ಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಜನಪದವು ಬಳಿ ನಡೆದಿದೆ.

ಇಲ್ಲಿನ ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ (15) ಆತ್ಮಹತ್ಯೆ ಮಾಡಿಕೊಂಡ ಬಾಲಕ

ಬಡಕಬೈಲಿನ ಖಾಸಗಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದ ಈತ ಕಲಿಕೆ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬುದನ್ನು ಮನೆಯವರು ಅನುಮಾನಿಸಿದ್ದಾರೆ. ಬುಧವಾರ ರಾತ್ರಿ ಸುಮಾರು 7.30 ಗಂಟೆಗೆ ಸ್ನಾನ ಮಾಡಲೆಂದು ಬಾತ್ ರೂ ಗೆ ತೆರಳಿದ ಮಗ 8 ಗಂಟೆಯಾದರೂ ವಾಪಸ್ ಬಾರದೇ ಇರುವುದನ್ನು ಕಂಡ ತಾಯಿ ಬಾಗಿಲು ಬಡಿದರೂ ಬಾಗಿಲು ತೆಗೆಯದ ಹಿನ್ನೆಲೆಯಲ್ಲಿ ಬಾಗಿಲು ಮುರಿದು ಒಳಗೆ ನುಗ್ಗಿದಾಗ ಈತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button