ಕರಾವಳಿ

ಬಂಟ್ವಾಳ: ಟೆಂಪೋ ಹಿಂದಕ್ಕೆ ಚಲಿಸಿ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮೂರು ವರ್ಷದ ಮಗು ಸಾವು

Views: 89

ಕನ್ನಡ ಕರಾವಳಿ ಸುದ್ದಿ :ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಟೆಂಪೋವೊಂದು ಏಕಾಏಕಿ ಹಿಮ್ಮುಖವಾಗಿ ಚಲಿಸಿದ್ದು, ಈ ವೇಳೆ ಆಟವಾಡುತ್ತಿದ್ದ ಮೂರರ ಹರೆಯದ ಮಗು ಟೆಂಪೋ ಚಕ್ರದಡಿಗೆ ಸಿಲುಕಿ ಮೃತಪಟ್ಟ ಘಟನೆ ಬಂಟ್ವಾಳದ ಲೊರೆಟ್ಟೊಪದವು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.

ಫರಂಗಿಪೇಟೆ ಸಮೀಪದ 10ನೇ ಮೈಲಿಗಲ್ಲು ನಿವಾಸಿ ದಿ. ಉನೈಸ್ ಎಂಬವರ ಪುತ್ರಿ ಆಶಿಕ (3) ಮೃತ ಬಾಲಕಿ ಎಂದು ಗುರುತಿಸಲಾಗಿದೆ.

ತನ್ನ ಅಜ್ಜಿಯ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಸಂದರ್ಭ ಮನೆಯ ಮುಂಭಾಗ ನಿಲ್ಲಿಸಿದ್ದ ಟೆಂಪೋವಿನ ಗೇರ್ ಅನ್ನು ಮಕ್ಕಳು ಎಳೆದಿದ್ದು, ಈ ವೇಳೆ ಟೆಂಪೊ ಹಿಂದಕ್ಕೆ ಚಲಿಸಿ  ಆಟವಾಡುತ್ತಿದ್ದ ಮಗುವಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಮಗುವನ್ನು ತತ್‌ಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗಿಲ್ಲ. ಘಟನೆಯ ಕುರಿತು ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related Articles

Back to top button