ಬಂಡಾಯ ಅಭ್ಯರ್ಥಿ ರಘುಪತಿ ಭಟ್‌ಗೆ ನೋಟಿಸ್ ಜಾರಿ ಮಾಡಿದ ಬಿಜೆಪಿ

Views: 114
ಬೆಂಗಳೂರು: ನೈರುತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್ ವಿರುದ್ಧ ರಾಜ್ಯ ಬಿಜೆಪಿ ಕ್ರಮಕ್ಕೆ ಮುಂದಾಗಿದೆ. ಶಿಸ್ತು ಸಮಿತಿಯಿಂದ ರಘುಪತಿ ಭಟ್‌ಗೆ ನೋಟಿಸ್ ಜಾರಿಗೊಳಿಸಿದ್ದು, ಎರಡು ದಿನದಲ್ಲಿ ಸ್ಪಷ್ಟೀಕರಣ ನೀಡುವಂತೆ ಸೂಚಿಸಿದೆ.
ಈ ಸಂಬಂಧ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರು ಮಾಜಿ ಶಾಸಕ, ನೈರುತ್ಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಗೆ ನೋಟಿಸ್ ನೀಡಿದ್ದು, ಶಿಸ್ತು ಸಮಿತಿ ಮುಂದೆ ಬಂಡಾಯ ಸ್ಪರ್ಧೆಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡುವಂತೆ ಕೇಳಿದ್ದಾರೆ. ಎರಡು ದಿನಗಳ ಒಳಗಾಗಿ ಸ್ಪಷ್ಟೀಕರಣ ನೀಡುವಂತೆ ನೋಟಿಸ್ ಜಾರಿಗೊಳಿಸಲಾಗಿದೆ
ಇಂದು ಬೆಳಗ್ಗೆಯಷ್ಟೇ ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣಾ ಕಣದಿಂದ 24 ಗಂಟೆಯೊಳಗೆ ನಿವೃತ್ತಿ ಘೋಷಿಸಿ ಇಲ್ಲವೇ ಪಕ್ಷದ ಶಿಸ್ತು ಉಲ್ಲಂಘನೆಗಾಗಿ ಕ್ರಮ ಎದುರಿಸಲು ಸಿದ್ಧರಾಗಿ ಎಂದು ಕೆ ರಘುಪತಿ ಭಟ್‌ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ ಸುನೀಲ್ ಕುಮಾರ್ ಎಚ್ಚರಿಕೆ ನೀಡಿದ್ದರು.ಅದರ ಬೆನ್ನಲ್ಲೇ ನೋಟಿಸ್ ಜಾರಿಯಾಗಿದೆ.






