ಬಸವರಾಜ್ ಬೊಮ್ಮಾಯಿಗೆ ಹೈಕಮಾಂಡ್ ಬುಲಾವ್ :ಇಂದು ದೆಹಲಿಯಲ್ಲಿ ವಿಪಕ್ಷ ನಾಯಕನ ಆಯ್ಕೆ ಕುರಿತು ಚರ್ಚೆ

Views: 0
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಯಲ್ಲಿ ಗ್ರಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದು ,ವಿರೋಧ ಪಕ್ಷದ ನಾಯಕನ ನೇಮಕದ ವಿಚಾರವಾಗಿ ಚರ್ಚಿಸುವ ಸಾಧ್ಯತೆ ಇದೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಅವರೇ ಸೂಕ್ತ ಎಂದು ಹೇಳಿದ್ದು, ಈ ಬೇಟಿ ಮಹತ್ವ ಪಡೆದುಕೊಂಡಿದೆ.
ಬೊಮ್ಮಾಯಿ ಅಮಿತ್ ಶಾ ಅವರನ್ನು ಭೇಟಿಯಾಗಿ ಸಮಸ್ಯೆ ಬಗ್ಗೆ ಚರ್ಚಿಸಲು ಮತ್ತು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎಂದು ಮೂಲಗಳಿಂದ ತಿಳಿಸಿದೆ.
ರಾಜ್ಯ ವಿಧಾನ ಸಭಾ ಚುನಾವಣೆ ನಡೆದು ಮೂರು ತಿಂಗಳು ಕಳೆದಿದ್ದರು ಬಿಜೆಪಿ ಇನ್ನೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ, ರಾಜ್ಯದ ಆಡಳಿತರೂಢ ಕಾಂಗ್ರೆಸ್ ನಾಯಕರು ಈ ವಿಚಾರವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಲೆ ಇದ್ದಾರೆ.
ಕರ್ನಾಟಕ ಬಿಜೆಪಿ ವಿಚಾರವಾಗಿ ಆಂತರಿಕ ಕಚ್ಚಾಟದಿಂದ ಮೋದಿ ಮತ್ತು ಅಮಿತ್ ಶಾ ಕರ್ನಾಟಕ ರಾಜಕಾರಣದಲ್ಲಿ ಆಸಕ್ತಿ ಕಳೆದುಕೊಂಡಿದ್ದಾರೆ. ಯತ್ನಾಳ್ ಅವರನ್ನು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಲು ಬಿಎಸ್ ಯಡಿಯೂರಪ್ಪ ವಿರೋಧ ವ್ಯಕ್ತಪಡಿಸಿದ್ದಾರೆ.






