ಇತರೆ

ಬಸ್‌ನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ – ಹೆಡ್‌ ಕಾನ್ಸ್‌ಟೇಬಲ್‌ಗೆ ಹಿಗ್ಗಾಮುಗ್ಗ ಥಳಿತ

Views: 56

ಕನ್ನಡ ಕರಾವಳಿ ಸುದ್ದಿ: ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಹೆಡ್‌ ಕಾನ್ಸ್‌ಟೇಬಲ್‌ಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ಗಂಗಮ್ಮನ ಗುಡಿ ಸರ್ಕಲ್ ಬಳಿ ನಡೆದಿದೆ.

ಸಂಜಯ್ ನಗರ ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಮಂಜುನಾಥ್ ಅವರ ಮೇಲೆ ಹಲ್ಲೆ ನಡೆದಿದೆ. ಜಾಲಹಳ್ಳಿಗೆ ತೆರಳಲು ಅವರು ಬಸ್‌ ಹತ್ತಿದ್ದರು. ಬಸ್‌ನಲ್ಲಿ ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಮಾತಿಗೆ ಮಾತು ಬೆಳೆದು ದೊಡ್ಡ ಗಲಾಟೆಯಾಗಿದೆ.

ಮಹಿಳೆ ಸಂಬಂಧಿಕರಿಗೆ ಕರೆ ಮಾಡಿ, ಗಂಗಮ್ಮನ ಗುಡಿ ಸರ್ಕಲ್ ಬಳಿಗೆ ಕರೆಸಿಕೊಂಡಿದ್ದಳು. ಬಸ್‌ ಅಲ್ಲಿಗೆ ಬರುತ್ತಿದ್ದಂತೆ ಯುವಕರ ಗುಂಪು ಹಲ್ಲೆ ನಡೆಸಿದೆ. ನಾನು ಪೊಲೀಸ್ ಪೊಲೀಸ್ ಎಂದರೂ ಬಿಡದೆ ಬಟ್ಟೆ ಹರಿದು ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ಮುಖ ಹಾಗೂ ಮೈಮೇಲೆ ಗಾಯಗಳಾಗಿದ್ದು, ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Related Articles

Back to top button
error: Content is protected !!