ಬಸ್ರೂರು ಅಪ್ಪಣ್ಣ ಹೆಗ್ಡೆ ಡಿಜಿಟಲ್ ಲರ್ನಿಂಗ್ ಸೆಂಟರ್ ಮತ್ತು ಆಡಿಯೋ ವಿಶ್ಯುವಲ್ ಹಾಲ್ ಉದ್ಘಾಟನೆ
"ವಿದ್ಯಾರ್ಥಿಗಳು ಈ ತಂತ್ರಜ್ಞಾನ ಯುಗದಲ್ಲಿ ಕೌಶಲ್ಯ ತರಬೇತಿ ಪಡೆದು ಕೊಳ್ಳುವ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ, ಆ ಮೂಲಕ ಉತ್ತಮ ಉದ್ಯೋಗ ಪಡೆಯಲು ಸಾಧ್ಯ"-----ಆರ್ ಉಪೇಂದ್ರ ಶೆಟ್ಟಿ

Views: 592
ಕನ್ನಡ ಕರಾವಳಿ ಸುದ್ದಿ: ಶಾರದಾ ಕಾಲೇಜು ಬಸ್ರೂರು ಇಲ್ಲಿ ಬಸ್ರೂರು ಅಪ್ಪಣ್ಣ ಹೆಗ್ಡೆ ಡಿಜಿಟಲ್ ಲರ್ನಿಂಗ್ ಸೆಂಟರ್ ಮತ್ತು ಆಡಿಯೋ ವಿಶ್ಯುವಲ್ ಹಾಲ್ ಇದರ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿದ ಯುನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ಬೆಂಗಳೂರು ಇದರ ಅಧ್ಯಕ್ಷರಾದ ಶ್ರೀ ಆರ್ ಉಪೇಂದ್ರ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಈ ತಂತ್ರಜ್ಞಾನ ಯುಗದಲ್ಲಿ ಕೌಶಲ್ಯ ತರಬೇತಿ ಪಡೆದು ಕೊಳ್ಳುವ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಾಧ್ಯ ಆ ಮೂಲಕ ಉತ್ತಮ ಉದ್ಯೋಗ ಪಡೆಯಲು ಸಾಧ್ಯ ಎಂದರು.
ಮುಖ್ಯ ಅತಿಥಿಗಳಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ ಕಿರಣ್ ಕುಮಾರ್ ಕೊಡ್ಗಿ ಆಗಮಿಸಿ ಆಡಿಯೋ ವಿಶ್ಯುವಲ್ ಹಾಲ್ ಉದ್ಘಾಟಿಸಿ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸಮರ್ಥರಾದಾಗ ಮಾತ್ರ ಉದ್ಯೋಗ ಮಾರುಕಟ್ಟೆಯಲ್ಲಿ ಉತ್ತಮ ಉದ್ಯೋಗ ಪಡೆಯಲು ಸಾಧ್ಯ. ಕಾಲೇಜು ನೀಡುವ ಸೌಲಭ್ಯವನ್ನು ವಿದ್ಯಾರ್ಥಿಗಳು ಉಪಯೋಗಿಸಿಕೊಳ್ಳಬೇಕು ಕಾಲೇಜಿನ ಹಳೆ ವಿದ್ಯಾರ್ಥಿಗಳು ಸಂಸ್ಥೆಯ ಅಭಿವೃದ್ಧಿಗೆ ಸಹಕರಿಸಿದಾಗ ಕಾಲೇಜು ಅಭಿವೃದ್ಧಿ ಸಾಧ್ಯ ಎಂದು ಹೇಳಿದರು .
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಶಾರದಾ ಕಾಲೇಜು ಟ್ರಸ್ಟ್ ಬಸ್ರೂರು.ಇದರ ಅಧ್ಯಕ್ಷರಾದ ಶ್ರೀ ಕೆ ಜಯಕರ್ ಶೆಟ್ಟಿ ವಹಿಸಿದ್ದರು.
ಶ್ರೀ ಶಾರದಾ ಕಾಲೇಜು ಟ್ರಸ್ಟ್ ಇದರ ಟ್ರಸ್ಟಿಗಳಾದ ಶ್ರೀಮತಿ ಅನುಪಮಾ ಎಸ್ ಶೆಟ್ಟಿ ಪ್ರಸ್ತಾಪಿಸಿದರು.
ಶ್ರೀ ಶಾರದ ಕಾಲೇಜ್ ಬಸ್ರೂರು ಇದರ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಸ್ವಾಗತಿಸಿದರು, ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ರವಿಚಂದ್ರ ಅತಿಥಿಗಳ ಪರಿಚಯಿಸಿದರು.
ಕಾರ್ಯಕ್ರಮದಲ್ಲಿ ಶ್ರೀ ಶಾರದಾ ಕಾಲೇಜು ಇದರ ಟ್ರಸ್ಟಿಗಳು, ವಿಶ್ವಸ್ಥ ಮಂಡಳಿ ಸದಸ್ಯರು,ನಿವೃತ್ತ ಪ್ರಾಧ್ಯಾಪಕರು, ಹಳೆ ವಿದ್ಯಾರ್ಥಿಗಳು ,ವಿದ್ಯಾರ್ಥಿಗಳ ಪೋಷಕರು ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.
ಕನ್ನಡ ವಿಭಾಗದ ಉಪನ್ಯಾಸಕಿ ಕುಮಾರಿ ಮಮತಾ ಮತ್ತು ಇತಿಹಾಸ ವಿಭಾಗದ ಉಪನ್ಯಾಸಕಿ ಶ್ರೀಮತಿ ಆಶಾ ಕಾರ್ಯಕ್ರಮ ನಿರೂಪಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನಾರಾಯಣ ಪೈ ಧನ್ಯವಾದಗಳನ್ನು ಅರ್ಪಿಸಿದರು.