ಕನ್ನಡ ಕರಾವಳಿ ಸುದ್ದಿ: ಬಸ್ರೂರು ನಿವೇದಿತಾ ಪ್ರೌಢ ಶಾಲೆಯಲ್ಲಿ ಬಸ್ರೂರು ವೀರರಾಜೇಂದ್ರ ಹೆಗ್ಡೆಯವರ 25ನೇ ಸಂಸ್ಮರಣ ಕಾರ್ಯಕ್ರಮ ಸೆ.8ರಂದು ಆಚರಿಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಲಾ ಸಂಚಾಲಕರಾದ ಶ್ರೀಮತಿ ಅನುಪಮಾ ಎಸ್ ಶೆಟ್ಟಿ ಅವರು ಮಾತನಾಡಿ, ಬಿವಿಆರ್ ಹೆಗ್ಡೆ ಅವರು ಗ್ರಾಮೀಣ ಭಾಗದಲ್ಲಿ ಶಾಲೆಗಳನ್ನು ಸ್ಥಾಪಿಸಿ, ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ಕೊಟ್ಟಿದ್ದರು. ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಅವರ ಕೊಡುಗೆಗಳನ್ನು ಸ್ಮರಿಸಿದರು.
ಮುಖ್ಯ ಅತಿಥಿಗಳಾಗಿ ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಶ್ರೀ ಸುರೇಶ್ ಗುಂಡಿಗೋಳಿ ಉಪಸ್ಥಿತರಿದ್ದರು. ಹಿಂದೂ ಮಾದರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಶಿಕ್ಷಕಿ ಶ್ರೀಮತಿ ನಮ್ರತಾ ಪ್ರಭು ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯರಾದ ಸುಬ್ಬಣ್ಣ ಕೋಣಿ ಸ್ವಾಗತಿಸಿದರು.ವಿಜ್ಞಾನ ಶಿಕ್ಷಕಿ ಶ್ರೀಮತಿ ಸರೋಜಾ ಎಂ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಶಿಕ್ಷಕ ಶ್ರೀ ಪ್ರದೀಪ್ ಕುಮಾರ್ ಶೆಟ್ಟಿ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ರಾಜಾರಾಮ ಶೆಟ್ಟಿ ಕಾರ್ಯಕ್ರಮ ಸಂಘಟಿಸಿದರು. ಎರಡು ಸಂಸ್ಥೆಗಳ ಶಿಕ್ಷಕ -ಶಿಕ್ಷಕಿಯರು ಕಾರ್ಯಕ್ರಮಕ್ಕೆ ಸಹಕರಿಸಿದರು.