ಆರೋಗ್ಯ

ಬಸ್ರೂರು ಶಾರದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

"ಯೋಗ ನಮ್ಮ ದೇಹ ಮತ್ತು ಮನಸ್ಸನ್ನು ಸಮತೋಲನದಲ್ಲಿ ಇರಿಸುತ್ತದೆ,ಇದು ವಿದ್ಯಾರ್ಥಿಗಳಲ್ಲಿ ಒತ್ತಡ ನಿರ್ವಹಣೆ ಏಕಾಗ್ರತೆ ಹಾಗೂ ಶಿಸ್ತಿನ ಅಭಿವೃದ್ಧಿಗೆ ಸಹಾಯ ಮಾಡುತ್ತದೆ".

Views: 62

ಕನ್ನಡ ಕರಾವಳಿ ಸುದ್ದಿ: ಬಸ್ರೂರು ಶಾರದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ಆಚರಿಸಲಾಯಿತು.

ಕಾರ್ಯಕ್ರಮದ ಆರಂಭವನ್ನು ಪ್ರಾರ್ಥನೆಯೊಂದಿಗೆ ಪ್ರಾರಂಭಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಸಂತೋಷ್ ಶೆಟ್ಟಿ ಅವರು ಮಕ್ಕಳನ್ನು ಉದ್ದೇಶಿಸಿ ಪ್ರತಿದಿನ ಯೋಗ ಅಭ್ಯಾಸ ಮಾಡುವುದರಿಂದ ದೇಹ ಮತ್ತು ಮನಸ್ಸಿನ ಆರೋಗ್ಯ ಹೆಚ್ಚುತ್ತದೆ ಎಂದು ತಿಳಿಸಿದರು. 

ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶ್ರೀ ರಾಧಾಕೃಷ್ಣ ಶೆಟ್ಟಿ ಅವರು ಮಕ್ಕಳನ್ನು ಉದ್ದೇಶಿಸಿ ಯೋಗ ಆರೋಗ್ಯಕ್ಕೆ ಹಾಗೂ ದೇಹದ ಎಲ್ಲಾ ಅಂಗಗಳಿಗೂ ಯಾವ ರೀತಿಯಾಗಿ ಪ್ರಯೋಜನಕಾರಿಯಾಗಿದೆ ಎಂದು ಸವಿಸ್ತಾರವಾಗಿ ವಿವರಿಸಿದರು. 

ಕಾರ್ಯಕ್ರಮದಲ್ಲಿ ಅಶೋಕ್ ಕೆರೆ ಕಟ್ಟೆ ಅವರು ಮಕ್ಕಳಿಗೆ 10 ನಿಮಿಷ ಯೋಗ ಪ್ರಾತ್ಯಕ್ಷಿಕೆ ನೀಡಿದರು. ಹಾಗೂ 10 ನಿಮಿಷ ಧ್ಯಾನ ಮಾಡಿದರೆ ಒಂದು ಗಂಟೆ ಓದುವ ಏಕಾಗ್ರತೆ ಹೆಚ್ಚುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಅಧಿಕಾರಿಯಾದ ಶ್ರೀಮತಿ ಆಶಾ ಶೆಟ್ಟಿ ,ಶಾಲಾ ಪ್ರಾಂಶುಪಾಲರಾದ ರೇಷ್ಮಾ ಅ ಆಡಪ ಹಾಗೂ ಶಿಕ್ಷಕರು / ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಸಹ ಶಿಕ್ಷಕಿ ಪ್ರಿಯಾ ಕಾರ್ಯಕ್ರಮವನ್ನು ನಿರ್ವಹಿಸಿದರು.

Related Articles

Back to top button