ಶಿಕ್ಷಣ

ಬಸ್ರೂರು ಶ್ರೀ ಶಾರದಾ ಅಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ 

Views: 337

ಕನ್ನಡ ಕರಾವಳಿ ಸುದ್ದಿ:” ಶಕ್ತಿ ಮತ್ತು ಶಿಸ್ತಿನ ಸಂಕೇತ – ಕರಾಟೆ .” ತಾಲ್ಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ತಮ್ಮ ಶಕ್ತಿ, ಶಿಸ್ತು ಮತ್ತು ಕ್ರೀಡಾ ಮನೋಭಾವವನ್ನು ಪ್ರದರ್ಶಿಸಿ ಶಾರೀರಿಕ ಸಾಮರ್ಥ್ಯ ಹಾಗೂ ಮಾನಸಿಕ ದೃಢತೆಯನ್ನು ಮೆರೆದರು.

ಕರ್ನಾಟಕ ಸರ್ಕಾರ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಡುಪಿ. ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಕುಂದಾಪುರ, ಇವರು ನಡೆಸಿದ ತಾಲ್ಲೂಕು ಮಟ್ಟದ ಕರಾಟೆ ಪಂದ್ಯಾಟವು ಝೀಯಾ ಪಬ್ಲಿಕ್ ಆಂಗ್ಲ ಮಾಧ್ಯಮ ಶಾಲೆ ಕಂಡ್ಲೂರು ಇವರ ಆಶ್ರಯದಲ್ಲಿ ನಡೆಯಿತು. ಕರಾಟೆ ಪಂದ್ಯಾಟದಲ್ಲಿ ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪೃಥ್ವಿರಾಜ್ 10ನೇ ತರಗತಿ, ಸಾನಿಯಾ 9ನೇ ತರಗತಿ, ನಿಜಾಫ್ 8ನೇ ತರಗತಿ, ನೌಮನ್ 8ನೇ ತರಗತಿ , ಮಧೀಹ ಹೀನಾ 7ನೇ ತರಗತಿ ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾಗೆ ಉಜೈರ್ 8ನೇ ತರಗತಿ, ನಿಶಾಂತ್ 9ನೇ ತರಗತಿ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ. ದಿಗಂತ್ 9ನೇ ತರಗತಿ ತೃತೀಯ ಸ್ಥಾನವನ್ನು ಗಳಿಸಿದ್ದಾರೆ.

ಈ ಮೂಲಕ ಶಾಲೆಯ ಕೀರ್ತಿಯನ್ನು ಎತ್ತರಕ್ಕೆ ಕೊಂಡೊಯ್ದ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು ಭೋದಕ / ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Back to top button
error: Content is protected !!