ಶಿಕ್ಷಣ

ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ 

Views: 41

ಕುಂದಾಪುರ :ನಮ್ಮೆಲ್ಲರ ಜೀವನದಲ್ಲೂ ತಂದೆ–ತಾಯಿಗಳಂತೆ ಶಿಕ್ಷಕರ ಪಾತ್ರವು ಬಹಳ ಮಹತ್ವದ್ದು. ಕೈಹಿಡಿದು ಅಕ್ಷರ ತಿದ್ದಿ, ಓದಿ ಬರೆಯಲು ಕಲಿಸುವುದಷ್ಟೇ ಬದುಕಿನ ಕೌಶಲಗಳನ್ನೂ ಕಲಿಸುತ್ತಾ ಜೀವನದಲ್ಲಿ ಮುಂದೆ ಸಾಗುವಂತೆ ಮಾಡುವ ಶಿಕ್ಷಕರು ಒಂದರ್ಥದಲ್ಲಿ ನಮ್ಮ ಬದುಕನ್ನು ರೂಪಿಸುವ ಶಿಲ್ಪಿಗಳು. ಬದುಕಿನಲ್ಲಿ ನಮ್ಮನ್ನು ಸರಿಯಾದ ದಾರಿಯಲ್ಲಿ ಸಾಗುವಂತೆ ಮಾಡುವವರೇ ಶಿಕ್ಷಕರು. ಇಂತಹ ದೈವಸ್ವರೂಪಿ ಶಿಕ್ಷಕರಿಗೆ ಗೌರವ ಸಲ್ಲಿಸುವ ಸಲುವಾಗಿ ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಉದಯ್ ಗಾಂವ್ಕರ್, ಶಾಲಾ ಸಂಚಾಲಕ ಸಂತೋಷ್ ಶೆಟ್ಟಿ, ಆಡಳಿತಾಧಿಕಾರಿ ಶ್ರೀಮತಿ ಆಶಾ ಸಂತೋಷ್ ಶೆಟ್ಟಿ, ಶೈಕ್ಷಣಿಕ ನಿರ್ದೇಶಕ ಪ್ರಕಾಶ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರು ಶಿಕ್ಷಕರು ಉಪಸ್ಥಿತರಿದ್ದರು.

Related Articles

Back to top button