ಶಿಕ್ಷಣ
ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ ಕ್ರಿಸ್ಮಸ್ ಸಂಭ್ರಮ

Views: 50
ಕನ್ನಡ ಕರಾವಳಿ ಸುದ್ದಿ:ಮಕ್ಕಳಿಗೆ ಎಲ್ಲಾ ಹಬ್ಬಗಳ ಜ್ಞಾನಾರ್ಜನೆ ಆಗಬೇಕೆಂಬ ಉದ್ದೇಶದಿಂದ ಹಮ್ಮಿಕೊಂಡಿದ್ದ ಕ್ರಿಸ್ಮಸ್ ಆಚರಣೆಯ ಸಂದರ್ಭದಲ್ಲಿ ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ಸಾಹದಿಂದ ಪಾಲ್ಗೊಂಡರು.
ಸಾಂತಾ ಕ್ಲಾಸ್ ವೇಷ ಧರಿಸಿದ ವಿದ್ಯಾರ್ಥಿಗಳು ಮುದ್ದು ಮಕ್ಕಳೊಂದಿಗೆ ಹಾಡಿ ಕುಣಿಯುವುದರ ಮೂಲಕ ಮಕ್ಕಳನ್ನು ರಂಜಿಸಿದರು. ಪುಟಾಣಿಗಳು ತಾವು ತಂದ ಉಡುಗೊರೆಗಳನ್ನು ತಮ್ಮ ಸ್ನೇಹಿತರೊಂದಿಗೆ ವಿನಿಮಯ ಮಾಡಿಕೊಂಡರು ಹಾಗೂ ಸಂಭ್ರಮ ಪಟ್ಟರು ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಶ್ರೀಯುತ ಸಂತೋಷ್ ಶೆಟ್ಟಿ , ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಮಮತಾ ಪೂಜಾರಿ,ಆಡಳಿತ ನಿರ್ದೇಶಕರಾದ ಶ್ರೀಮತಿ ಆಶಾ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.








