ಶಿಕ್ಷಣ

ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆ: ಕಿಂಡರ್ ಗಾರ್ಡನ್ ಮಕ್ಕಳ ಪದವಿ ಪ್ರದಾನ ಸಮಾರಂಭ

Views: 35

ಕನ್ನಡ ಕರಾವಳಿ ಸುದ್ದಿ: ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಿಂಡರ್ ಗಾರ್ಡನ್ ಮಕ್ಕಳ ಪದವಿ ಪ್ರದಾನ ಸಮಾರಂಭವನ್ನು ಭವ್ಯವಾಗಿ ಆಯೋಜಿಸಲಾಗಿದೆ.

ಮುಖ್ಯ ಅತಿಥಿಯಾಗಿ ಬಸ್ರೂರು ಪ್ರಾಥಮಿಕ ಆರೋಗ್ಯ ಕೇಂದ್ರ ಇಲ್ಲಿನ ವೈದ್ಯರಾದ ವಿದ್ಯಾರವರು “ಮಕ್ಕಳ ಪ್ರಾಥಮಿಕ ಶಿಕ್ಷಣವು ಅವರ ಭವಿಷ್ಯದ ಭದ್ರ ಪಾಯವಷ್ಟೇ ಅಲ್ಲ, ಆರೋಗ್ಯಕರ ಜೀವನಶೈಲಿಗೂ ಒಂದು ಬುನಾದಿ. ಪೋಷಕರು ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದರೊಂದಿಗೆ ಆರೋಗ್ಯವಂತರಾಗಿ ಬೆಳೆಯಲು ಸಹಕರಿಸಬೇಕು” ಎಂದು ಹೇಳಿದರು.

ಶಾಲಾ ಸಂಚಾಲಕರಾದ ಸಂತೋಷ್ ಶೆಟ್ಟಿ ಅವರು “ಇಂದಿನ ಪುಟ್ಟ ಮಕ್ಕಳ ಈ ಸಾಧನೆಯು ಅವರ ಭವಿಷ್ಯದ ಪಯಣದಲ್ಲಿ ಮೊದಲ ಹೆಜ್ಜೆಯಾಗಿದೆ. ಅವರ ಬೆಳವಣಿಗೆಯಲ್ಲಿ ಪಾಲ್ಗೊಳ್ಳುವುದು ನಮ್ಮೆಲ್ಲರ ಪಾಲಿಗೆ ಅದೃಷ್ಟದ ಸಂಗತಿ” ಎಂದರು.

ಮಕ್ಕಳ ಕಲಾತ್ಮಕ ಪ್ರದರ್ಶನ, ನೃತ್ಯ, ಹಾಗೂ ವಿದಾಯ ಭಾಷಣಗಳು ಕಾರ್ಯಕ್ರಮವನ್ನು ಇನ್ನಷ್ಟು ಸ್ಮರಣೀಯಗೊಳಿಸಿದವು.

ಪೋಷಕರು, ಶಿಕ್ಷಕರು ಮತ್ತು ಅತಿಥಿಗಳು ಮಕ್ಕಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶಾಲಾ ಶೈಕ್ಷಣಿಕ ನಿರ್ದೇಶಕರಾದ ಶ್ರೀ ಪ್ರಕಾಶ್ ಶೆಟ್ಟಿ , ಪ್ರಾಂಶುಪಾಲರಾದ ಶ್ರೀಮತಿ ಮಮತಾ ಪೂಜಾರಿ, ಆಡಳಿತ ಅಧಿಕಾರಿ ಶ್ರೀಮತಿ ಆಶಾ ಶೆಟ್ಟಿ ಉಪಸ್ಥಿತರಿದ್ದರು.

ಐಯಾಂಕ್ ಬಿ.ಪೂಜಾರಿ ಸ್ವಾಗತಿಸಿದರು. ಆರುಷ್ ಅಸ್ಪಾಕ್ ವಂದಿಸಿದರು.

Related Articles

Back to top button