ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆ: ಹಿರಿಯ ಪ್ರಾಥಮಿಕ, ಪ್ರೌಢ ಶಾಲಾ ವಿದ್ಯಾರ್ಥಿಗಳ ಪೋಷಕರ ಸಭೆ

Views: 126
ಕುಂದಾಪುರ: ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ಅ.10 ರಂದು ನಡೆಯಿತು.
ಶಾಲಾ ಸಂಚಾಲಕರಾದ ಶ್ರೀಯುತ ಸಂತೋಷ್ ಕುಮಾರ್ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಆಡಳಿತ ನಿರ್ದೇಶಕರಾದ ಪ್ರಕಾಶ್ ಶೆಟ್ಟಿ, ಪ್ರಾಂಶುಪಾಲರಾದ ಶ್ರೀಮತಿ ಮಮತಾ ಪೂಜಾರಿ, ಆಡಳಿತಾಧಿಕಾರಿ ಶ್ರೀಮತಿ ಆಶಾ ಶೆಟ್ಟಿ ಸಭೆಯಲ್ಲಿ ಉಪಸ್ಥಿತರಿದ್ದರು.
ಪ್ರಾಂಶುಪಾಲರಾದ ಶ್ರೀಮತಿ ಮಮತಾ ಪೂಜಾರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಶಾರದಾ ವಿದ್ಯಾ ಸಂಸ್ಥೆಯು ಗ್ರಾಮೀಣ ವಿಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಸಂಸ್ಥೆಯಾಗಿ ಬೆಳೆಯಲು ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಅವಿರತ ಶ್ರಮಿಸಬೇಕು ಎಂದು ಕರೆ ನೀಡಿದರು.
ಶಾಲಾ ಆಡಳಿತ ನಿರ್ದೇಶಕರಾದ ಶ್ರೀಯುತ ಪ್ರಕಾಶ್ ಶೆಟ್ಟಿ ಅವರು ಮಾತನಾಡಿ, ಮಕ್ಕಳಿಗೆ ನೀತಿ ಕಥೆಗಳನ್ನು ಹೇಳಿ ಅವರಲ್ಲಿ ಆದರ್ಶ ವ್ಯಕ್ತಿತ್ವವನ್ನು ಬೆಳೆಸುವುದು ಪೋಷಕರ ಆದ್ಯ ಕರ್ತವ್ಯ ಎಂದು ತಿಳಿ ಹೇಳಿದರು.
ಸಹಾಯಕ ಆಡಳಿತಾಧಿಕಾರಿ ಸುಮಂತ್ ಸ್ವಾಗತಿಸಿದರು.ಸಹ ಶಿಕ್ಷಕಿ ಪ್ರಿಯಾ ವಂದಿಸಿದರು.ವೀಣಾ ಡಿ’ ಮೆಲ್ಲೊ ಕಾರ್ಯಕ್ರಮ ನಿರೂಪಿಸಿದರು.