ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆ: ವಾರ್ಷಿಕ ಬಹುಮಾನ ವಿತರಣಾ ಸಮಾರಂಭ
Views: 353
ಕನ್ನಡ ಕರಾವಳಿ ಸುದ್ದಿ: ಬ್ರಹ್ಮಶ್ರೀ ಎಜುಕೇಶನ್ ಟ್ರಸ್ಟ್ ಪ್ರವರ್ತಿತ ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಬಿಂಬ 2.0” 2k25 ವಿಶಿಷ್ಟ ವಿನೂತನ ಕಾರ್ಯಕ್ರಮದಡಿಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ ನವೆಂಬರ್ 14ರಂದು ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣವು ಪ್ರಮುಖ ಪಾತ್ರ ವಹಿಸುತ್ತದೆ. ಇದು ಕೇವಲ ಪಠ್ಯಕ್ಕೆ ಮಾತ್ರ ಸೀಮಿತವಾಗಿರದೆ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಮಾನವೀಯತೆ, ಸಂಸ್ಕಾರ, ಸಾಮಾಜಿಕ ಕೌಶಲ್ಯ ಬೆಳೆಸುವಲ್ಲಿ ಶಿಕ್ಷಕರು ಮತ್ತು ಪೋಷಕರು ಒಟ್ಟಾಗಿ ಕೆಲಸ ಮಾಡಿ ಪ್ರೋತ್ಸಾಹದಾಯಕ ವಾತಾವರಣ ನಿರ್ವಹಿಸಿದಾಗ ಶಿಕ್ಷಣದ ಗುಣಮಟ್ಟ ಇನ್ನಷ್ಟು ಎತ್ತರಕ್ಕೆ ಏರಿಸಲು ಸಾಧ್ಯ ಎಂದರು.
ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಬಹುಮಾನ ವಿತರಿಸಿ ಮಾತನಾಡಿ, 20 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಶೈಕ್ಷಣಿಕ ಪ್ರಗತಿಯಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಶಿಕ್ಷಣ ಸಂಸ್ಥೆಯನ್ನು ಶ್ಲಾಘಿಸಿದರು. ಪ್ರತಿಯೊಂದು ಮಗುವಿನಲ್ಲಿಯೂ ವಿಶಿಷ್ಟವಾದ ಪ್ರತಿಭೆ ಇದ್ದೇ ಇದೆ. ಮಗುವಿನ ಆತ್ಮಸ್ಥೈರ್ಯ ಇನ್ನಷ್ಟು ಪ್ರಗತಿ ಸಾಧಿಸಲು ಶಿಕ್ಷಕರು ಮತ್ತು ಪೋಷಕರ ಪಾತ್ರ ದೊಡ್ಡದು ಎಂದರು.
ವೇದಿಕೆಯಲ್ಲಿ ಶಿಕ್ಷಣ ಸಂಸ್ಥೆಯ ಚೇರ್ಮನ್ ಬ್ರಹ್ಮಶ್ರೀ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಶೈಕ್ಷಣಿಕ ಪ್ರಗತಿ ಸಾಧಿಸುವ ಮೂಲಕ ಅತ್ಯುತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದರು
ಬಸ್ರೂರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನಕರ ಶೆಟ್ಟಿ, ವಿದ್ಯಾರ್ಥಿ- ಪೋಷಕರ ಸಮಿತಿ ಅಧ್ಯಕ್ಷೆ ಪ್ರೇಮ, ಟ್ರಸ್ಟಿಗಳಾದ ಸುಧೀರ್, ನಾಗೇಶ್, ಯತಿರಾಜ್ ಶೆಟ್ಟಿ, ಶಾಲಾ ಆಡಳಿತಾಧಿಕಾರಿ ಆಶಾ ಸಂತೋಷ್ ಕುಮಾರ್ ಶೆಟ್ಟಿ, ವಿದ್ಯಾರ್ಥಿ ಕೌನ್ಸಿಲ್ ಅಧ್ಯಕ್ಷ ಪೃಥ್ವಿರಾಜ್ ಉಪಸ್ಥಿತರಿದ್ದರು.
ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾದ ಅಮಿತಾ, ಶಿಲ್ಪ, ವಿಮಲಾ ಶೆಟ್ಟಿ, ಮಮತಾ, ಜ್ಯೋತಿ, ಸುವರ್ಣ, ಜಮಾಲ್, ಜಯಶೀಲ್ ಶೆಟ್ಟಿ, ವಿಘ್ನೇಶ್, ಶಾಹಿನಾಬಾದ್ ಅವರನ್ನು ಗುರುತಿಸಿ ಗೌರವಿಸಲಾಯಿತು.
ಶಾಲಾ ಮುಖ್ಯ ಶಿಕ್ಷಕಿ ರೇಷ್ಮಾ ಅಡಪ ಸ್ವಾಗತಿಸಿದರು. ಶಿಕ್ಷಕಿಯರಾದ ಪ್ರಿಯಾ, ವನಿತ ಕಾರ್ಯಕ್ರಮ ನಿರೂಪಿಸಿದರು. ವೀಣಾ ಡಿ’ಮೆಲ್ಲೋ ವಂದಿಸಿದರು.










