ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರಭಕ್ತಿಯೊಂದಿಗೆ 77ನೇ ಗಣರಾಜ್ಯೋತ್ಸವ ಆಚರಣೆ
"ಸಂವಿಧಾನದ ಮೌಲ್ಯಗಳು ನಮ್ಮ ಜೀವನದ ದೀಪ"
Views: 0
ಕನ್ನಡ ಕರಾವಳಿ ಸುದ್ದಿ: 77ನೇ ಗಣರಾಜ್ಯೋತ್ಸವದ ಅಂಗವಾಗಿ ಬಸ್ರೂರು ಶ್ರೀ ಶಾರದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಕ್ತಿಭಾವ ಹಾಗೂ ಶಿಸ್ತುಬದ್ಧವಾಗಿ ಕಾರ್ಯಕ್ರಮವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿಗಳು ಪಥ ಸಂಚಲನ ನಡೆಸಿ, ರಾಷ್ಟ್ರಭಕ್ತಿಯ ಸಂದೇಶವನ್ನು ಸಾರಿದರು. ನಂತರ ಶಾಲಾ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ರಾಷ್ಟ್ರಗೀತೆ ಹಾಡಲಾಯಿತು.
ವಿದ್ಯಾರ್ಥಿಗಳು ನೃತ್ಯ, ಭಾಷಣ ಹಾಗೂ ದೇಶಭಕ್ತಿ ಗೀತೆಗಳ ಮೂಲಕ ಗಣರಾಜ್ಯೋತ್ಸವದ ಮಹತ್ವವನ್ನು ಮನಮುಟ್ಟುವಂತೆ ಪ್ರದರ್ಶಿಸಿದರು.
ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ರೇಷ್ಮಾ ಅಡಪ ಅವರು ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಮಹತ್ವದ ಕುರಿತು ವಿವರವಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಶ್ರೀಯುತ ಸಂತೋಷ್ ಶೆಟ್ಟಿ ಅವರು ಮಕ್ಕಳಿಗೆ ಸಂವಿಧಾನ, ನಮ್ಮ ಕರ್ತವ್ಯಗಳು ಹಾಗೂ ಜವಾಬ್ದಾರಿಗಳ ಬಗ್ಗೆ ಅರಿವು ಮೂಡಿಸುವಂತೆ ಉಪನ್ಯಾಸ ನೀಡಿದರು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಮತ್ತು ಶಿಸ್ತುಭಾವನೆ ಬೆಳೆಸುವಲ್ಲಿ ಸಹಕಾರಿಯಾಯಿತು.
ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಅಧಿಕಾರಿಯಾದ ಶ್ರೀಮತಿ ಆಶಾ ಶೆಟ್ಟಿ ಹಾಗೂ ಶಿಕ್ಷಕ /ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಸಹ ಶಿಕ್ಷಕಿಯಾದ ಶ್ರೀಮತಿ ಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.









